‘ಯುನಿಸೆಫ್ ಇಂಡಿಯಾ’ಗೆ ರಾಯಭಾರಿಯಾದ ಕರೀನಾ ಕಪೂರ್

ಬಾಲಿವುಡ್ ಬೆಡಗಿ ಕರೀನಾ ಕಪೂರ್ (Kareena Kapoor) ಯುನಿಸೆಫ್ ಇಂಡಿಯಾ (UNICEF India) ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್ ಜೊತೆ ಉತ್ತಮ ನಂಟು ಹೊಂದಿರುವ ಕರೀನಾ ಇದೀಗ ರಾಯಭಾರಿಯಾಗಿ ಆಯ್ಕೆಯಾಗಿರುವ ಬಗ್ಗೆ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಗೌರವದ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ತಮಿಳಿನ ನಟ ಕಾರ್ತಿ ಜೊತೆ ಶ್ರೀಲೀಲಾ ಡ್ಯುಯೇಟ್

ಕರೀನಾ ಪೋಸ್ಟ್‌ನಲ್ಲಿ, ನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯದೇ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇದೀಗ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದಿಂದ ಕರೀನಾ ಕಪೂರ್ ಹೊರಬಂದಿದ್ದಾರೆ ಎನ್ನಲಾಗಿದೆ. ಡೇಟ್ಸ್ ಸಮಸ್ಯೆಯಿಂದ ಸಿನಿಮಾ ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಅವರ ಜಾಗಕ್ಕೆ ನಯನತಾರಾ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಅಂದಹಾಗೆ, ಕರೀನಾ ಕಪೂರ್ ಕಡೆಯದಾಗಿ ‘ಕ್ರೂ’ (Crew) ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸಿಂಗಂ ಅಗೇನ್ ಚಿತ್ರದಲ್ಲಿ ಕರೀನಾ ನಟಿಸಲಿದ್ದಾರೆ.