ಮನೆಯ ಸಹಾಯಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ – ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರಿಗೆ ಅವರಿಗೆ ರಿಲೀಫ್‌ ಸಿಕ್ಕಿದ್ದು ಕೋರ್ಟ್‌ ಜಾಮೀನು (Bail) ಮಂಜೂರು ಮಾಡಿದೆ.

ಕಿಡ್ನಾಪ್ ಕೇಸ್‍ನಲ್ಲಿ ಈಗಾಗಲೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ ಕೋರ್ಟ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ನೀಡಿದೆ.

5 ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ.

ಏನಿದು ಪ್ರಕರಣ?
ರೇವಣ್ಣ ಮತ್ತು ಅವರ ಪುತ್ರ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು 47 ವರ್ಷದ ಮನೆಯ ಸಹಾಯಕಿಯು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು

ಶಾಸಕರ ನಿವಾಸದಲ್ಲಿ ತಂದೆ ಮತ್ತು ಮಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು. ಈ ಪ್ರಕರಣದಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿದ್ದರು.