ನನ್ನ ಸ್ನೇಹಿತ ಟ್ರಂಪ್‌ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ: ದಾಳಿಗೆ ಪ್ರಧಾನಿ ಮೋದಿ ಖಂಡನೆ

ನವದಹೆಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ನಾನು ತೀವ್ರ ಕಳವಳಗೊಂಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ

ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಳವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ತಿಂಗಳುಗಳ ಮೊದಲೇ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಟ್ರಂಪ್‌ ಕಿವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಿದುಳು ತಿನ್ನುವ ಅಮೀಬಾ ಸೋಂಕಿಗೆ ಪಾಕಿಸ್ತಾನದ ವ್ಯಕ್ತಿ ಬಲಿ

ದುರ್ಘಟನೆಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಮಾಜಿ ಅಧ್ಯಕ್ಷ ಬರಕ್‌ ಒಬಾಮಾ ಸೇರಿದಂತೆ ಅನೇಕ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.