ಮದುಮಗನ ಗೆಟಪ್‌ನಲ್ಲಿ ನಾಗಚೈತನ್ಯ- ಸೀಕ್ರೆಟ್ ಆಗಿ ಶೋಭಿತಾ ಜೊತೆ ಮದುವೆಗೆ ರೆಡಿಯಾದ್ರಾ ಸಮಂತಾ ಮಾಜಿ ಪತಿ?

ಟಾಲಿವುಡ್ ನಟ ನಾಗಚೈತನ್ಯ (Nagachaitanya) ಅವರು ಇತ್ತೀಚೆಗೆ ನಟಿ ಶೋಭಿತಾ ಜೊತೆ ಸೀಕ್ರೆಟ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಗುಟ್ಟಾಗಿ ಹಸೆಮಣೆ ಏರಲು ನಾಗಚೈತನ್ಯ ರೆಡಿಯಾಗಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಇಂದು (ಆ.28) ನಾಗಚೈತನ್ಯ ಮದುಮಗನ ಗೆಟಪ್‌ನಲ್ಲಿ ಸ್ಟೈಲೀಶ್ ಲುಕ್‌ನಲ್ಲಿ ಕಾರಿನಲ್ಲಿ ಕುಳಿತು ಹಾಯ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ನಿಶ್ಚಿತಾರ್ಥದಂತೆಯೇ ಗುಟ್ಟಾಗಿ ಶೋಭಿತಾ (Sobhita) ಜೊತೆ ಮದುವೆಯಾಗಲು ನಟ ರೆಡಿ ಆದ್ರಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ.ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಹೇಮಾ ವರದಿ: 17 ದೂರುಗಳು ದಾಖಲು

 

View this post on Instagram

 

A post shared by Viral Bhayani (@viralbhayani)


ಅಸಲಿಗೆ ವಿಚಾರ ಬೇರೆನೇ ಇದೆ. ಹೈದರಾಬಾದ್‌ನ ಹೊಸ ಸ್ಟೋರ್‌ವೊಂದರ ಉದ್ಘಾಟನೆಗೆ ನಟ ಮದುಮಗನನಂತೆ ರೆಡಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆ ಸೀಕ್ರೆಟ್ ಆಗಿ ಮದುವೆನೇ ಆಗ್ತಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದಾರೆ.

ಇನ್ನೂ ಆ.8ರಂದು ಶೋಭಿತಾಗೆ ನಾಗಚೈತನ್ಯ ರಿಂಗ್ ತೊಡಿಸುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದರು. ಇನ್ನೂ ಮುಂದಿನ ವರ್ಷದ ಅಂತ್ಯದಲ್ಲಿ ಈ ಜೋಡಿ ವಿದೇಶದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್‌ಗೆ ಪ್ಲ್ಯಾನ್ ಮಾಡಿದ್ದಾರೆ. ಅದಕ್ಕೂ ಮುನ್ನ ಇಬ್ಬರೂ ಒಪ್ಪಿಕೊಂಡಿರುವ ಸಿನಿಮಾಗಳನ್ನು ಪೂರ್ಣಗೊಳಿಸಬೇಕಿದೆ.