‘ಪಬ್ಲಿಕ್‌ ಟಿವಿ’ ವರದಿಗಾರ ಸುಖ್‌ಪಾಲ್‌ ಪೊಳಲಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಪಬ್ಲಿಕ್‌ ಟಿವಿ’ ಹಿರಿಯ ವರದಿಗಾರ ಸುಖ್‌ಪಾಲ್‌ ಪೊಳಲಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಂಗಳೂರಿನ‌ ನೆಹರೂ ಮೈದಾನದಲ್ಲಿ ಶುಕ್ರವಾರ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಎಂಎಲ್‌ಸಿ ಐವಾನ್ ಡಿಸೋಜಾ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಈ ವೇಳೆ ಉಪಸ್ಥಿತರಿದ್ದರು.