ಕಲಬುರಗಿ| ನರ್ಸ್‌ ವೇಷದಲ್ಲಿ ಬಂದ ಮಹಿಳೆಯರಿಂದ ಹಸುಗೂಸು ಕಿಡ್ನ್ಯಾಪ್‌

ಕಲಬುರಗಿ: ನರ್ಸ್‌ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಹಸುಗೂಸು ಅಪಹರಣ ಮಾಡಿರುವ ಘಟನೆ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಜಿಲ್ಲಾಸ್ಪತ್ರೆ ವಾರ್ಡ್ ನಂಬರ್ 115 ರಲ್ಲಿ ಕಸ್ತೂರಿ ಎಂಬವರಿಗೆ ಹೆರಿಗೆಯಾಗಿತ್ತು. ನಿನ್ನೆ ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ನರ್ಸ್ ವೇಶದಲ್ಲಿ ಬಂದು ಇಬ್ಬರು ಮಹಿಳೆಯರು ಮಗು ಕಿಡ್ನ್ಯಾಪ್‌ ಮಾಡಿದ್ದಾರೆ.

ರಕ್ತ ತಪಾಸಣೆಗಾಗಿ ಮಗುವನ್ನ ಕರೆದುಕೊಂಡು ಬನ್ನಿ ಅಂತಾ ನಕಲಿ ನರ್ಸ್‌ಗಳು ಹೇಳಿದ್ದರು. ನರ್ಸ್‌ಗಳು ಸಂಪೂರ್ಣವಾಗಿ ಮುಖ ಮುಚ್ಚಿಕೊಂಡು ಬಂದಿದ್ದರು. ಅದರಂತೆ ಮಗುವಿನ ಚಿಕ್ಕಮ್ಮ ಚಂದ್ರಕಲಾ ಮಗುವನ್ನ ರಕ್ತ ತಪಾಸಣೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗುವನ್ನ ನಮಗೆ ಕೊಡಿ ಅಂತಾ ಹೇಳಿದರು. ಬಳಿಕ ಮಗುವನ್ನ ಎತ್ತಿಕೊಂಡು ಎಸ್ಕೇಪ್‌ ಆಗಿದ್ದಾರೆ.

ರಾಮಕೃಷ್ಣ ಮತ್ತು ಪತ್ನಿ ಕಸ್ತೂರಿ ದಂಪತಿ ಮಗು ಕಿಡ್ನ್ಯಾಪ್‌ ಆಗಿದೆ. ಸೈಯದ್ ಚಿಂಚೋಳಿ ಗ್ರಾಮದಿಂದ ದಂಪತಿ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಬಂದಿದ್ದರು. ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.