ಶೋಭಾ ಕರಂದ್ಲಾಜೆ ಭೇಟಿ ಮಾಡಿದ ಮುನಿಯಪ್ಪ – ಕೋಲಾರದಲ್ಲಿ ಕೌಶಲ್ಯ ಆಧಾರಿತ ಕೇಂದ್ರ ಸ್ಥಾಪನೆಗೆ ಅನುದಾನ ಬಿಡುಗಡೆಗೆ ಮನವಿ

ಕೋಲಾರ: ಆಹಾರ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಕೇಂದ್ರ ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆಯನ್ನು (Shobha Karandlaje) ಭೇಟಿ ಮಾಡಿದ್ದು, ಕೋಲಾರ (Kolar) ಜಿಲ್ಲೆಯಲ್ಲಿ ಕೌಶಲ್ಯ ಆಧಾರಿತ ಕೇಂದ್ರ ಸ್ಥಾಪನೆಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವೆಯನ್ನು ಭೇಟಿ ಮಾಡಿದ ಮುನಿಯಪ್ಪ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ವೇಮಗಲ್‌ನಲ್ಲಿ ತಾಂತ್ರಿಕ ತರಬೇತಿ ಕೇಂದ್ರ ಮಂಜೂರಾಗಿದ್ದು, ಅನುದಾನ ಬಿಡುಗಡೆಯಾಗದ ಕಾರಣದಿಂದಾಗಿ ಯೋಜನೆ ಆರಂಭವಾಗಿಲ್ಲ ಎಂದರು. ಇದನ್ನೂ ಓದಿ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಬಂಧನ

ತರಬೇತಿ ಕೇಂದ್ರದ ಮೂಲಕ ಸುಮಾರು ಒಂದು ಸಾವಿರ ಮಂದಿಗೆ ತರಬೇತಿ ನೀಡಬಹುದು. ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಮುನಿಯಪ್ಪ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವೆ ಶೀಘ್ರವೇ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ದಂಪತಿ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌ – ಸ್ಥಳದಲ್ಲೇ ಸಾವು