ಬೈಕ್, ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ – 3 ಮಂದಿ ಸಾವು

ಕಾರವಾರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಸವಾರರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಹೊನ್ನಾವರ ನಗರದ ಶರಾವತಿ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಭಟ್ಕಳ ತಾಲೂಕಿನ ರಾಘವೇಂದ್ರ ಸೋಮಯ್ಯ ಗೌಡ (34), ಗೌರೀಶ್ ನಾಯ್ಕ್ (25), ರಮೇಶ್ ನಾಯ್ಕ್ (22) ಮೃತಪಟ್ಟಿದ್ದಾರೆ.

ವಿಜಯಪುರದಿಂದ‌ ಮಂಗಳೂರಿಗೆ ಹೋಗುತ್ತಿದ್ದ ಬಸ್‌ಗೆ ಭಟ್ಕಳ ಭಾಗದಿಂದ ಬೈಕ್ ಸವಾರರು ಅತೀ ವೇಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.