Uttar Pradesh| ಧಾರ್ಮಿಕ ಉತ್ಸವದಲ್ಲಿ ವೇದಿಕೆ ಕುಸಿದು ಐವರು ಸಾವು – 40 ಮಂದಿಗೆ ಗಾಯ

ಲಕ್ನೋ: ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 40 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಾಗ್‌ಪತ್‌ನಲ್ಲಿ (Baghpat) ನಡೆದಿದೆ.

ಬಾಗ್‌ಪತ್‌ನ ಬಾಗೌರ್‌ನಲ್ಲಿ ನಡೆದ ಲಡ್ಡೂ ಸಮಾರಂಭದ (Nirvana Laddu Parv) ವೇಳೆ ಬಿದಿರು ಮತ್ತು ಮರದಿಂದ ಮಾಡಲಾಗಿದ್ದ ತಾತ್ಕಾಲಿಕ ವೇದಿಕೆ ಕುಸಿದು ಬಿದ್ದು ಈ ಘಟನೆ ನಡೆದಿದೆ. ಇದನ್ನೂ ಓದಿ: ಮದ್ವೆಯಾಗಿ 12 ವರ್ಷದ ಬಳಿಕ ಗರ್ಭವತಿ – ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವು

ಪೊಲೀಸ್ ಅಧಿಕಾರಿಗಳ ಪ್ರಕಾರ, ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸಲು ನೂರಾರು ಭಕ್ತರು ಇಂದು ಬೆಳಗ್ಗೆ ಸ್ಥಳಕ್ಕೆ ತಲುಪಿದರು. ಭಕ್ತರಿಗಾಗಿ ಸಿದ್ಧಪಡಿಸಲಾದ ತಾತ್ಕಾಲಿಕ ವೇದಿಕೆಯು ಅತಿಯಾದ ಭಾರದಿಂದ ಕುಸಿದಿದ್ದು, ಹತ್ತಾರು ಜನರು ಅದರ ಕೆಳಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: Microfinance | ಮನೆ, ಶಾಲೆಗೆ ಬಂದು ಟಾರ್ಚರ್‌ – ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆ

ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಹೆಚ್ಚಿನ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಜಿಲ್ಲಾಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಸ್ಥಳದಲ್ಲಿ ಈಗಾಗಲೇ ಅಂಬುಲೆನ್ಸ್ ಇದ್ದ ಕಾರಣ ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು

ಸುಮಾರು 30 ವರ್ಷಗಳಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಘಟನೆಯಲ್ಲಿ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಇಪ್ಪತ್ತು ಜನರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಬಾಗ್‌ಪತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಸ್ಮಿತಾ ಲಾಲ್ ಹೇಳಿದ್ದಾರೆ. ಇದನ್ನೂ ಓದಿ: MUDA Scam| ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್

ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಭಕ್ತರಿಗೆ ಚಿಕಿತ್ಸೆ ನೀಡುವಾಗ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: Kolar| ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಸರ್ಕಾರಿ ಬಸ್ ಚಾಲನೆ – ವೀಡಿಯೋ ವೈರಲ್