PUBLiC TV Impact| ತೋಟದ ವಸತಿ ಪ್ರದೇಶಗಳಲ್ಲಿ ಮೊಬೈಲ್ ಟಾರ್ಚ್ ಬಳಸಿ ಓದುತ್ತಿದ್ದ ಮಕ್ಕಳಿಗೆ ವಿದ್ಯುತ್ ಪೂರೈಕೆ

ಚಿಕ್ಕೋಡಿ: ತೋಟದ ವಸತಿ ಪ್ರದೇಶಗಳಲ್ಲಿ ರಾತ್ರಿ ವೇಳೆ ವಿದ್ಯುತ್ ಇಲ್ಲದೇ ಮೊಬೈಲ್ ಟಾರ್ಚ್ ಬಳಸಿ ಓದುತ್ತಿದ್ದ ಮಕ್ಕಳಿಗೆ `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಎಚ್ಚೆತ್ತ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ವಿದ್ಯುತ್ ಪೂರೈಕೆ ಮಾಡಿದ್ದಾರೆ.

ಹೌದು, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧ ಗ್ರಾಮಗಳ ತೋಟದ ವಸತಿ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಇರಲಿಲ್ಲ. ಹೀಗಾಗಿ ಅಲ್ಲಿನ ಮಕ್ಕಳು ಮೊಬೈಲ್ ಟಾರ್ಚ್ ಬಳಿಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ತೋಟದ ವಸತಿ ಪ್ರದೇಶಗಳಲ್ಲಿ ರೈತರ ಮಕ್ಕಳು ಪರದಾಡುತ್ತಿದ್ದರು.ಇದನ್ನೂ ಓದಿ: ‘ಟಾಕ್ಸಿಕ್’ನಲ್ಲಿ ಕೆಲಸ ಮಾಡಿದ್ದು, ನಿಜಕ್ಕೂ ಅದ್ಭುತ ಅನುಭವ- ಯಶ್‌ರನ್ನು ಕೊಂಡಾಡಿದ ಅಮೆರಿಕ ನಟ

ಈ ಕುರಿತು `ಪಬ್ಲಿಕ್ ಟಿವಿ’ ಸುದ್ದಿಯನ್ನು ಬಿತ್ತರಿಸಿತ್ತು. ವರದಿಯ ಬೆನ್ನಲ್ಲೇ ಎಚ್ಚೆತ್ತ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ವಿದ್ಯಾರ್ಥಿಗಳ ಅನೂಕುಲಕ್ಕಾಗಿ ರಾತ್ರಿಯಿಡಿ ವಿದ್ಯುತ್ ಪೂರೈಕೆ ಮಾಡಿದ್ದಾರೆ. ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಯುವವರೆಗೂ ವಿದ್ಯುತ್ ವ್ಯತ್ಯಯ ಮಾಡದಿರಲು ಆಡಳಿತ ಮಂಡಳಿ ತೀರ್ಮಾನಿಸಿದೆ.

ಸದ್ಯ ರಾತ್ರಿಯಿಡಿ ವಿದ್ಯುತ್ ದೊರಕುವಂತೆ ಮಾಡಿಕೊಟ್ಟ `ಪಬ್ಲಿಕ್ ಟಿವಿ’ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ: ಬಸ್‌ನಲ್ಲಿ ಕಳ್ಳತನ ಮಾಡ್ತಿದ್ದ ಕಳ್ಳಿಯರ ಗ್ಯಾಂಗ್ ಅರೆಸ್ಟ್ – 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ