ನವೋದಯ ಸ್ವ-ಸಹಾಯ ಸಂಘಕ್ಕೆ ರಜತ ಸಂಭ್ರಮ: ಮೇ 10ಕ್ಕೆ ಮಂಗಳೂರಿನಲ್ಲಿ ಅದ್ಧೂರಿ ಕಾರ್ಯಕ್ರಮ

ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳಿಗೆ (Navodaya Self Help Group) 25 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ರಜತ ಸಂಭ್ರಮ ಕಾರ್ಯಕ್ರಮ ಮೇ.೧೦ರಂದು ಅದ್ದೂರಿಯಾಗಿ ನಡೆಯುತ್ತದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ (SCCDCC Bank) ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.

ಮಂಗಳೂರಿನಲ್ಲಿ (Mangaluru) ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಮುಖ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪೇಜಾವರ ಮಠಾಧೀಶರು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಲಕ್ಷ್ಮಣ ಸವದಿ, ಜಿ.ಟಿ.ದೇವೇಗೌಡ, ಡಾ.ಉದಯ್ ಶಂಕರ್ ಆವಸ್ತಿ, ಮುರುಗೇಶ್ ನಿರಾಣಿ, ಸುನೀಲ್ ಕುಮಾರ್, ಶಿವರಾಮ್ ಹೆಬ್ಬಾರ್, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪಹಲ್ಗಾಮ್‌ ದಾಳಿ – ದೆಹಲಿಯಲ್ಲಿ ಪಾಕ್‌ ಹೈಕಮಿಷನ್‌ನಿಂದ ಕೇಕ್‌ ಆರ್ಡರ್‌!

ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 3,000 ಬಸ್‌ಗಳಲ್ಲಿ ಮಹಿಳೆಯರು ನಗರಕ್ಕೆ ಬರಲಿದ್ದು, ಅಂದು ದೇಶದಲ್ಲೇ ಮೊದಲ ಬಾರಿಗೆ ಒಂದೂವರೆ ಲಕ್ಷ ಮಂದಿ ಸಂಘದ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತೀ ಬಸ್‌ಗಳಲ್ಲಿ ಇಬ್ಬರು ಪುರುಷ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು. ತಿಂಡಿ, ಊಟೋಪಚಾರದ ವ್ಯವಸ್ಥೆ ಮಾಡಲಿದ್ದು, ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಶ್ರಮಿಸಲಾಗುವುದು ಎಂದರು. ಇದನ್ನೂ ಓದಿ: ಪಹಲ್ಗಾಮ್ ದಾಳಿ – ಭಾರತದಲ್ಲಿ ಪಾಕ್‌ನ X ಖಾತೆ ಬಂದ್‌

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್‌ನ ಟ್ರಸ್ಟಿಗಳಾದ ವಿನಯ ಕುಮಾರ್ ಸೂರಿಂಜೆ, ಭಾಸ್ಕರ್.ಎಸ್.ಕೋಟ್ಯಾನ್,ಶಶಿಕುಮಾರ್.ರೈ.ಬಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಕೆ.ಜೈರಾಜ್.ಬಿ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್.ಕೆ, ನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್.ಜೈನ್, ಸುನಿಲ್ ಕುಮಾರ್ ಬಜಗೋಳಿ, ಜಯಪ್ರಕಾಶ್ ತುಂಬೆ, ಟ್ರಸ್ಟ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.