ಉರಿ, ದಂಗಲ್ ಸಿನಿಮಾಗಳ ಖ್ಯಾತ ಮೇಕಪ್ ಕಲಾವಿದ ವಿಕ್ರಮ್ ಗಾಯಕ್ವಾಡ್ ನಿಧನ

ಬಾಲಿವುಡ್‌ನ (Bollywood) ಖ್ಯಾತ ಮೇಕಪ್ ಕಲಾವಿದ ವಿಕ್ರಮ್ ಗಾಯಕ್ವಾಡ್ (Vikram Gaikwad) ಅವರು ನಿಧನರಾಗಿದ್ದಾರೆ. ಮುಂಬೈ ನಿವಾಸದಲ್ಲಿ ಮೇ 10ರಂದು ಬೆಳಗ್ಗೆ ಅವರು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಬಾಲಿವುಡ್ ತಾರೆಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ


ವಿಕ್ರಮ್ ಗಾಯಕ್‌ವಾಡ್ ನಿಧನಕ್ಕೆ ಕಾರಣವೇನು ಎಂಬುದು ರಿವೀಲ್ ಆಗಿಲ್ಲ. ಅವರ ನಿಧನಕ್ಕೆ ಆಮೀರ್ ಖಾನ್ (Aamir Khan), ರಣವೀರ್ ಸಿಂಗ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:ಕಯಾದು ಸೌಂದರ್ಯಕ್ಕೆ ಕ್ಯೂ ನಿಂತ ಅರ್ಧ ಡಜನ್ ಸಿನಿಮಾ!

ಅಂದಹಾಗೆ, ಸಂಜು, ಪಿಕೆ, ದಂಗಲ್, ರಂಗ್ ದೆ ಬಸಂತಿ, 3 ಈಡಿಯಟ್ಸ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ವಿಕ್ರಮ್ ಕೆಲಸ ಮಾಡಿದ್ದಾರೆ. ಬಾಲಿವುಡ್ ಸಿನಿಮಾ ತಾರೆಯರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ.