ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್

ಬೆಂಗಳೂರು: ಸಿನಿಮಾ ಶೂಟಿಂಗ್‌ಗಾಗಿ ದರ್ಶನ್ (Darshan) ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿದೆ.

ಜೂನ್ 1ರಿಂದ 25ರವರೆಗೆ ವಿದೇಶದಲ್ಲಿ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ನಟ ದರ್ಶನ್ 57ನೇ ಸಿಸಿಹೆಚ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಡೆವಿಲ್ (Devil) ಸಿನಿಮಾದ ಶೂಟಿಂಗ್‌ಗೆ ದುಬೈ ಮತ್ತು ಯೂರೋಪ್ ತೆರಳಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?

ಮೇ 28ರಂದು ಕೋರ್ಟ್ ವಿಚಾರಣೆಯಲ್ಲಿ ದರ್ಶನ್ ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್ ಬರುವುದು ಅನುಮಾನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ವಿದೇಶಕ್ಕೆ ತೆರಳಲು ಅನುಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದರು. ಇದನ್ನೂ ಓದಿ: ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್

ನ್ಯಾಯಾಧೀಶ ಐ ಪಿ ನಾಯ್ಕ್ ಅವರು ವಾದ-ಪ್ರತಿವಾದ ಆಲಿಸಿ ಮೇ 30ಕ್ಕೆ ಆದೇಶ ಕಾಯ್ದಿರಿಸಿದ್ದರು. ಇದೀಗ ನ್ಯಾಯಾಧೀಶರು, ದರ್ಶನ್‌ಗೆ ಜೂನ್ 1ರಿಂದ 25ರವರೆಗೆ ಡೆವಿಲ್ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಿದ್ದಾರೆ.