ಮುಡಾ ಕೇಸ್ | ಅಕ್ರಮ ಸೈಟ್ ಹಂಚಿಕೆ ಆರೋಪ – ಮಾಜಿ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಅಸ್ತು

ಮೈಸೂರು: ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮುಡಾದ (MUDA case) ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ.

ಮುಡಾದ (Mysure Urban Development Authority) ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇ.ಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದನ್ನೂ ಓದಿ: ಮುಡಾ ಹಗರಣ : ಇಡಿಯಿಂದ 100 ಕೋಟಿ ಮೌಲ್ಯದ 92 ಆಸ್ತಿ ಮುಟ್ಟುಗೋಲು

ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮುಡಾ ಹಗರಣ ಕೇಸ್ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ಅಸಮಾಧಾನ ಹೊರಹಾಕಿದೆ. 6 ತಿಂಗಳಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಪ್ರಾಸಿಕ್ಯೂಷನ್ ಅನುಮತಿ ಎಂದು ತಡವಾಗುತ್ತಿದೆ ಎಂದು ಚಾಟಿ ಬೀಸಿದೆ.

ಇದೆಲ್ಲದರ ನಡುವೆ ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶಿಸಿ ಎಂದು ಸ್ನೇಹಮಯಿ ಕೃಷ್ಣ ಅವರು ಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಹೆಚ್.ವಿ ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದಾರೆ. ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.29ಕ್ಕೆ ಮುಂದೂಡಿದೆ. ಇದನ್ನೂ ಓದಿ: ಮುಡಾ ಹಗರಣ ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ಆಯೋಗದ ವರದಿ ಸಲ್ಲಿಕೆ