ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

ನವದೆಹಲಿ/ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಭೀಕರ ಕಾಲ್ತುಳಿತ (Stampede) ದುರಂತದ ಬಗ್ಗೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ತೀವ್ರ ನೋವನ್ನುಂಟು ಮಾಡಿದೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ದೇವರು ಅವರ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪಾರ್ಥಿಸುತ್ತೇನೆ. ಇನ್ನೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

ಕಾಲ್ತುಳಿತ ಸಂಭವಿಸಿದ್ದು ಹೇಗೆ?
ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: