ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಕುಟುಂಬ ಮುಡಾದಲ್ಲಿ (MUDA) ಪಡೆದ 14 ನಿವೇಶನಗಳ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅ.8ಕ್ಕೆ ಕಾಯ್ದಿರಿಸಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತನಿಖಾಧಿಕಾರಿ ಬದಲಾವಣೆ ಮತ್ತು ತನಿಖಾಧಿಕಾರಿ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ (ಸೆ.28) ನಡೆದ ವಿಚಾರಣೆಯಲ್ಲಿ ಸ್ನೇಹಮಯಿ ಕೃಷ್ಣ ಖುದ್ದು ವಾದ ಮಂಡಿಸಿದರು.ಇದನ್ನೂ ಓದಿ: ಪಾಕ್‌ ಸರ್ಕಾರದ ವಿರುದ್ಧ ಪಿಓಕೆಯಲ್ಲಿ ಭಾರೀ ಪ್ರತಿಭಟನೆ – ಷರೀಫ್‌, ಅಸಿಮ್ ಮುನೀರ್‌ಗೆ ಪುಕ ಪುಕ

ಸದ್ಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯ ಆದೇಶವನ್ನ ಅ.8ಕ್ಕೆ ಕೋರ್ಟ್ ಮುಂದೂಡಿದೆ. ಇದಕ್ಕೂ ಮುನ್ನ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ ಇಡಿ ತಕರಾರು ಅರ್ಜಿ ಸಲ್ಲಿಸಿತ್ತು.

ಈಗಾಗಲೇ ಈ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಇಡಿ ಅಧಿಕಾರಿಗಳು, ದಿನೇಶ್ ನಕಲಿ ದಾಖಲೆಗಳನ್ನು  ಸೃಷ್ಟಿ ಮಾಡಿ, ಈ ದಾಖಲೆಗಳ ಮೂಲಕ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ತಿಳಿಸಿತ್ತು.ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ