– 16 ವರ್ಷದ ಹಿಂದೆ ಮಠಕ್ಕೆ ಭೇಟಿ ಕೊಟ್ಟಿದ್ದ ನಮೋ
ಉಡುಪಿ: ಪ್ರಧಾನಿ ನರೇಂದ್ರ ಮೋದಿ (PM Modi )16 ವರ್ಷಗಳ ಬಳಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಹೌದು. ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ (Udupi Sri Krishna Math) ಭೇಟಿ ನೀಡಲಿದ್ದು, ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠಕ್ಕೂ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತ ಪಾರಾಯಣ, ಗೀತೋತ್ಸವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಅಲ್ಲದೇ ಮಠದ ವ್ಯಾಪ್ತಿಯಲ್ಲಿ ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದು, ಭಕ್ತರು, ಸಾರ್ವಜನಿಕರ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಲಿದ್ದಾರೆ.
16 ವರ್ಷಗಳ ಹಿಂದೆ ಪುತ್ತಿಗೆ ಪರ್ಯಾಯ ಸಂದರ್ಭ ಉಡುಪಿಗೆ ಭೇಟಿ ನೀಡಿದ್ದ ನರೇಂದ್ರ ಮೋದಿ, ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ಕೊಡ್ತಿದ್ದಾರೆ. ಪ್ರಧಾನಿ ಕಚೇರಿಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಪ್ರಕಟವಾಗಬೇಕಿದೆ.
