ಬೆಂಗಳೂರು: ಯಾರಿಗೂ ತಿಳಿಯದಂತೆ ಲಾರಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 40 ಜಾನುವಾರಗಳನ್ನು ನಗರದ ಹೊರವಲಯದ ನೆಲಮಂಗಲ ಬಳಿ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ನೆಲಮಂಗಲ ತಾಲೂಕಿನ ಡಾಬಸ್‍ಪೇಟೆ ಬಳಿ ಲಾರಿಯಲ್ಲಿ ಜಾನುವಾರುಗಳನ್ನು ತುಮಕೂರು ಮಾರ್ಗವಾಗಿ ಬೆಂಗಳೂರು ನಗರಕ್ಕೆ ಸಾಗಿಸುತ್ತಿದ್ದ ವೇಳೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಅದರಲ್ಲಿದ್ದ 40 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಇನ್ನೂ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದು, ಉಳಿದ ಮೂವರನ್ನು ಪೊಲೀಸೆರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಡಾಬಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply