ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕಿಳಿದ KSRTC ಬಸ್- 20 ಮಂದಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ಹಳ್ಳಕ್ಕಿಳಿದ ಪರಿಣಾಮ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ

ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಲಾಳು ಗೇಟ್ ಸಮೀಪ ಇಂದು ಬೆಳಗಿನ ಜಾವದಲ್ಲಿ ಈ ಘಟನೆ ನಡೆದಿದೆ. ಕೆಎ13- ಎಫ್2065 ಸಂಖ್ಯೆಯ ಸರ್ಕಾರಿ ಬಸ್ ಬೆಂಗಳೂರಿನಿಂದ ಹಾಸನಕ್ಕೆ ಬರುತ್ತಿತ್ತು. ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಹಳ್ಳದ ಕಡೆಗೆ ನುಗ್ಗಿದೆ. ಕೂಡಲೇ ಬಸ್ ನಿಂತ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ಆದ್ರೆ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಾಗಳಾಗಿವೆ.

ರಮೇಶ್ ಹಾಗೂ ಪ್ರದೀಪ್ ಎಂಬವರಿಗೆ ಕಾಲು ಮುರಿದಿದೆ. ಜವರೇಗೌಡ ಎಂಬವರಿಗೆ ತಲೆಗೆ ಪೆಟ್ಟಾಗಿದ್ದು, ಒಂಭತ್ತು ವರ್ಷದ ಮಂಜುನಾಥ್ ಕೈ ಬೆರಳು ಮುರಿದಿದೆ. ಗಾಯಾಳುಗಳನ್ನ ಬಿಜಿ ನಗರದ ಎಐಎಂಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವವರನ್ನು ಬೆಂಗಳೂರು ಹಾಗೂ ಹಾಸನಕ್ಕೆ ರವಾನಿಸಲಾಗಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *