ಬೆಂಗಳೂರು: ಅವಧಿಗೂ ಮುನ್ನವೇ ವಿಧಾನಸಭಾ ಚುನಾವಣೆ ನಡೆಯಲಿದೆ ಅನ್ನೋ ಮಾತು ರಾಜಕೀಯ ಪಡಸಾಲೆಯಲ್ಲಿ ಆಗಾಗ್ಗೆ ಕೇಳಿಬರುತಿತ್ತು. ಈಗ ಸರ್ಕಾರ ರೈತರ ಸಾಲಮನ್ನಾ ಮಾಡಿದ ಬಳಿಕ ರಾಜ್ಯದಲ್ಲೀಗ ಎಲೆಕ್ಷನ್ ಮೂಡ್ ಮನೆ ಮಾಡಿದೆ. ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ರೆ, ಲೆಕ್ಕಾಚಾರಗಳು ಜೋರಾಗಿವೆ.
ಸಾಲಮನ್ನಾ ಅಸ್ತ್ರವನ್ನ ಮತಗಳನ್ನಾಗಿ ಪರಿವರ್ತಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಸಖತ್ ಪ್ಲಾನ್ ಮಾಡಿದಂತಿದೆ. ಇದಕ್ಕೆ ಪುಷ್ಟಿ ಎನ್ನುವಂತೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿನಲ್ಲೇ ಮನೆ ಮಾಡಲಿದ್ದಾರೆ ಅನ್ನೋ ಮಾತು ಕೇಳಿ ಬಂದಿದೆ.
ಅಷ್ಟೇ ಅಲ್ಲದೇ ಜೊತೆಗೆ, ಇದೇ ತಿಂಗಳ 27 ರಿಂದ ಜುಲೈ 07ರವರೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಲಿಂಗಾಯಿತ ಮತ ಸೆಳೆಯಲು 29ರಂದು ಕೂಡಲ ಸಂಗಮದಿಂದಲೇ ಸಮಾವೇಶದ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಇದೇ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪಟ್ಟಿಯಲ್ಲಿ ಪ್ರಬಲವಾಗಿ ಕೇಳಿ ಬಂದಿದ್ದ ಲಿಂಗಾಯಿತ ನಾಯಕ ಎಸ್.ಆರ್ ಪಾಟೀಲ್ ಅವರು ಪಕ್ಷದ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ನಂತರ ಕಾಂಗ್ರೆಸ್ ಎಲ್ಲಾ ಘಟಕಗಳು ಹಾಗೂ ಜಿಲ್ಲಾಧ್ಯಕ್ಷರೊಂದಿಗೆ ವೇಣುಗೋಪಾಲ್ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಈ ಮಧ್ಯೆ, ಪಕ್ಷದ ಯಾವುದೇ ಸಚಿವರು, ಶಾಸಕರು ಯಾವುದೇ ಹಗರಣದಲ್ಲಿ ಸಿಲುಕಿಕೊಳ್ಳಬಾರದು ಅಂಥ ವಾರ್ನಿಂಗ್ ಕೊಟ್ಟಿದ್ದಾರೆ.
https://www.youtube.com/watch?v=tq1SE7Pu_hg

Leave a Reply