ಕಲಬುರಗಿ: ಲಾರಿಯೊಂದು ಇದ್ದಕ್ಕಿದಂತೆ ಬೆಂಕಿಯಿಂದ ಹೊತ್ತಿ ಉರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮಹಗಾಂವ ಕ್ರಾಸ್ ಬಳಿ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಲಾರಿ ಕಲಬುರಗಿಯಿಂದ ಬಸವ ಕಲ್ಯಾಣಕ್ಕೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಲಾರಿ ಯಾರಿಗೆ ಸೇರಿದ್ದು ಎಂದು ತಿಳಿದುಬಂದಿಲ್ಲ.
ಇತ್ತ ಬೆಂಗಳೂರಿನಲ್ಲಿ ದೊಮ್ಮಲೂರಿನ ಫ್ಲೈ ಓವರ್ ಬಳಿ ನಡುರಸ್ತೆಯಲ್ಲೇ ಟಾಟಾ ಏಸ್ ವಾಹನವೊಂದು ಧಗಧಗನೆ ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಟಾಟಾ ಏಸ್ ವಾಹನಕ್ಕೆ ಬೆಂಕಿ ಬಿದ್ದಿದೆ. ಬಳಿಕ ಕ್ಷಣ ಮಾತ್ರದಲ್ಲೇ ವಾಹನ ಸುಟ್ಟು ಭಸ್ಮವಾಗಿದೆ. ಅದೃಷ್ಟವಶತ್ ಘಟನೆಯಲ್ಲಿ ಯಾರಿಗೂ ಪ್ರಾಣಪಾಯವಾಗಿಲ್ಲ. ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
https://www.youtube.com/watch?v=xbm6qFXIo_Y

Leave a Reply