ಬೆಂಗಳೂರು: ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ನಡೆದಿದೆ.
ಮೃತರನ್ನು ವಿನಯ್ ಕುಮಾರ್ (36) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಹಾವೇರಿ ಜಿಲ್ಲೆಯವರು ಎಂದು ತಿಳಿದುಬಂದಿದೆ. ಅತ್ತಿಬೆಲೆಯಲ್ಲಿ ನೆಲೆಸಿದ್ದ ವಿನಯ್ ಕುಮಾರ್ ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.






Leave a Reply