ಸಂಸದ ಪ್ರತಾಪ ಸಿಂಹ ವಿರುದ್ಧ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅತೃಪ್ತಿ

ಬೆಂಗಳೂರು: ರಾಜ್ಯ ಯುವಮೋರ್ಚಾ ಘಟಕದ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯುವಮೋರ್ಚಾ ರಾಜ್ಯಾಧ್ಯಕ್ಷ, ಸಂಸದ ಪ್ರತಾಪ ಸಿಂಹ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದ ಪೂನಂ ಮಹಾಜನ್ ಕಾರ್ಯಕ್ರಮ ಸರಿಯಾಗಿ ಆಯೋಜನೆ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.

71ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ಮಧ್ಯರಾತ್ರಿ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯ ಯುವಮೋರ್ಚಾ ಘಟಕದ ವತಿಯಿಂದ ಮಿಡ್‍ನೈಟ್ ಮ್ಯಾರಥಾನ್ ಮತ್ತು ಧ್ವಜಾರೋಹಣ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬೈಯಿಂದ ಪೂನಂ ಮಹಾಜನ್ ಬೆಂಗಳೂರಿಗೆ ಆಗಮಿಸಿದ್ದರು.

ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮ ಸರಿಯಾಗಿ ಆಯೋಜನೆ ಮಾಡಲು ಯಾಕೆ ಆಗಿಲ್ಲ? 5 ನಿಮಿಷ ಮಾತನಾಡಲು ನಾನು ಮುಂಬೈನಿಂದ ಬರಬೇಕಾಗಿತ್ತೇ ಎಂದು ಪಕ್ಷದ ನಾಯಕರಲ್ಲಿ ಪೂನಂ ಮಹಾಜನ್ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಾರ್ಯಕ್ರಮದಲ್ಲಿ ಮಾತನಾಡಲು ಹೆಚ್ಚು ಅವಕಾಶ ನೀಡದ್ದಕ್ಕೆ ಬೇಸರ ವ್ಯಕ್ತಪಡಿಸಿದ ಅವರು ಅನಗತ್ಯವಾಗಿ ಹಣ ವೆಚ್ಚ ಮಾಡುವುದನ್ನು ಸಹ ನಿಲ್ಲಿಸಿ ಎಂದು ರಾಜ್ಯ ನಾಯಕರಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಏರ್‍ಪೋರ್ಟ್ ನಿಂದ ರಸ್ತೆಯಲ್ಲಿ ಬರುವಾಗಲೇ ರಾಜ್ಯ ಬಿಜೆಪಿ ನಾಯಕರಿಗೆ ಶಾ ತರಾಟೆ

Comments

Leave a Reply

Your email address will not be published. Required fields are marked *