ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರ್ತಾರಾ?- ದೇವೇಗೌಡ್ರು ಹೇಳಿದ್ದೇನು?

ಕಾರವಾರ: ಹೆಚ್‍ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರ್ ರಾಜಕಾರಣಕ್ಕೆ ಬರ್ತಾರೆ ಎಂಬ ವದಂತಿಯ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೆಗೌಡರು ಪ್ರತಿಕ್ರಿಯೆ ನೀಡಿದ್ದಾರೆ . ನಿಖಿಲ್ ಒಬ್ಬ ನಟನಾಗಿದ್ದು, ರಾಜಕಾರಣಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕುಮಾರಸ್ವಾಮಿಯವರ ಆರೋಗ್ಯ ಸರಿಯಿಲ್ಲದ ಕಾರಣ ಪಕ್ಷದ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಇಲ್ಲಿ ವಂಶ ಪಾರಂಪರ್ಯ ರಾಜಕೀಯ ನಡೆಸುವ ಉದ್ದೇಶವಿಲ್ಲ. ಕುಟುಂಬ ರಾಜಕಾರಣ ಆರೋಪ ಸರಿಯಲ್ಲವೆಂದು ತನ್ನ ಮೊಮ್ಮಗನ ನಿಲುವನ್ನು ದೇವೇಗೌಡರು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯನವರು ತಮ್ಮ ಬೆಂಬಲಿಗರೊಂದಿಗೆ ತೆರಳಿ ಮುಳಬಾಗಿಲ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ತಾನೊಬ್ಬ ನಾಸ್ತಿಕನೆಂದು ಹೇಳುತ್ತಿದ್ದವರು ಆಸ್ತಿಕರಾಗಿದ್ದಾರೆ ಎಂದು ವ್ಯಂಗವಾಡಿದರು.

ಪಕ್ಷದಲ್ಲಿ ಕುಮಾರಸ್ವಾಮಿ ಹಾಗೂ ರೇವಣ್ಣರ ನಡುವೆ ಯಾವುದೇ ನಾಯಕತ್ವದ ಪೈಪೊಟಿ ಇಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಡಿಸೆಂಬರ್‍ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಕುರಿತು ಟಿಕೆಟ್ ಆಕಾಂಕ್ಷಿಗಳಿಗೆ ಒಂದು ತಿಂಗಳ ಗಡುವು ನೀಡಲಾಗಿದೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *