ಮಂಡ್ಯ: ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮ ಕಾಲೇಜ್ ಬಸ್, ಕ್ಯಾಂಟರ್, ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ.
ನಗರದ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ಮುಂಭಾಗ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ಮೈಸೂರು ಕಡೆಗೆ ಚಲಿಸುತ್ತಿದ್ದ ಲಾರಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾರೆ. ಪರಿಣಾಮ ಲಾರಿಗೆ ಕಾಲೇಜ್ ಬಸ್, ಬಸ್‍ಗೆ ಕ್ಯಾಂಟರ್, ಕ್ಯಾಂಟರ್ ಗೆ ಕಾರ್ ಡಿಕ್ಕಿಯಾಗಿದೆ.

ಸರಣಿ ಅಪಘಾತದಿಂದ ವಾಹನಗಳು ಜಖಂ ಆಗಿವೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






Leave a Reply