ಬೆಂಗಳೂರು: ಕನ್ನಡ ಅಭಿಮಾನಿಗಳ ಮನಗೆದ್ದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಬರುವ ಅಭಿಮಾನಿಗಳಿಗೆ ಶಾಂತಿ ಹಾಗೂ ಶಿಸ್ತಿನಿಂದ ಇರುವಂತೆ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.
ಇದೇ ತಿಂಗಳ 16 ರಂದು ದರ್ಶನ್ 41 ನೇ ವಸಂತಕ್ಕೆ ಕಾಲಿಡಲಿದ್ದಾರೆ. ಪ್ರತಿ ವರ್ಷದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಅಭಿಮಾನಿಗಳ ಜೊತೆ ತಮ್ಮ ಹುಟ್ಟು ಹಬ್ಬವನನ್ನು ಆಚರಿಸಿಕೊಳ್ಳುತ್ತಾರೆ. ಆದರೆ ಈ ವೇಳೆ ಹೆಚ್ಚಿನ ಜನಸಂಖ್ಯೆ ಬರುವ ಅಭಿಮಾನಿಗಳು ದರ್ಶನ್ ರನ್ನು ಕಾಣಲು ಮನೆಯ ಕಾಂಪೌಂಡ್ ಗೋಡೆ ಹತ್ತಿ ಸಾಹಸ ಮಾಡುತ್ತಾರೆ. ಇದರಿಂದ ದರ್ಶನ್ ನೆರೆಮನೆಯವಿಗೆ ತೊಂದರೆ ಆಗುತ್ತಿದೆ. ಅಲ್ಲದೇ ಅಭಿಮಾನಿಗಳ ಜೀವಕ್ಕೂ ಹಾನಿಯಾಗುವ ಸಂಭವ ಹೆಚ್ಚಿದೆ. ಅದ್ದರಿಂದ ಈ ಬಾರಿ ದರ್ಶನ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ದರ್ಶನ್ ಟ್ವೀಟ್:
ನಲ್ಮೆಯ ಅಭಿಮಾನಿಗಳಲ್ಲಿ, ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ. ನನ್ನ ಹುಟ್ಟು ಹಬ್ಬದ ದಿನ ನೀವೆಲ್ಲ ದೂರ ದೂರದ ಊರುಗಳಿಂದ ಬಂದು ನನಗೆ ಶುಭಾಶಯ ಕೋರಿ ನಿಮ್ಮದೇ ಹುಟ್ಟು ಹಬ್ಬ ಎನ್ನುವಂತೆ ಸಂಭ್ರಮಿಸುದು ನನ್ನ ಯಾವುದೋ ಜನ್ಮದ ಪುಣ್ಯ ಫಲವೆಂದೇ ಭಾವಿಸುತ್ತೇನೆ. ಈ ನಿಮ್ಮ ಪ್ರೀತಿಗೆ ನಾನು ಚಿರಋಣಿ. ನಿಮಗೆಲ್ಲ ತುಂಬು ಹೃದಯದ ಧನ್ಯವಾದ.
ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ದಯವಿಟ್ಟು ನೀವೆಲ್ಲರೂ ಅಕ್ಕಪಕ್ಕದ ಮನೆಯ ನಿವಾಸಿಗಳಿಗೆ ತೊಂದರೆ ಆಗದಂತೆ ಶಾಂತಿ ಹಾಗೂ ಶಿಸ್ತಿನಿಂದ ವರ್ತಿಸಬೇಕಾಗಿ ನಿಮ್ಮೆಲ್ಲರಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ದಯವಿಟ್ಟು ಯಾರೂ ನನ್ನ ಅಕ್ಕಪಕ್ಕದ ಮನೆಯ ಕಾಂಪೌಂಡ್ ಹತ್ತುವುದು, ಒಳಪ್ರವೇಶಿಸುವುದು, ಹೂಕುಂಡಗಳನ್ನು ಬೀಳಿಸುವುದು, ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ ಅನುಚಿತ ವರ್ತನೆ ತೋರಬಾರದು. ನನ್ನ ಬಗ್ಗೆ ಇಷ್ಟೆಲ್ಲಾ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ ನನ್ನ ಈ ಕೋರಿಕೆಯನ್ನು ನಡೆಸಿಕೊಡುವಿರಾಗಿ ನಂಬಿರುತ್ತೇನೆ ಹಾಗೂ ಸಂಘದ ಕಾರ್ಯಕರ್ತರಿಗೆ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕಾಗಿ ವಿನಂತಿ.
— Darshan Thoogudeepa (@dasadarshan) February 2, 2018



Leave a Reply