ಕಲಬುರಗಿ: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ನಡೆದಿದೆ.
ಪ್ರಿಯಾಂಕಾ ಚೌವ್ಹಾಣ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪ್ರಿಯಾಂಕಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಭಾನುವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಮನೆಯವರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಸಂಬಂಧ ಚಿತ್ತಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply