ನಾಗವಲ್ಲಿ V/s ಆಪ್ತಮಿತ್ರ-2 ಚಿತ್ರದ ನಾಯಕನ ಮೇಲೆ 8 ಜನರಿಂದ ಹಲ್ಲೆ

ಬೆಂಗಳೂರು: ನಾಗವಲ್ಲಿ ವರ್ಸಸ್ ಆಪ್ತಮಿತ್ರ-2 ಚಿತ್ರದ ನಾಯಕನ ಮೇಲೆ ಹಲ್ಲೆ ನಡೆದಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಟ ಕಾರ್ತಿಕ್ ವಿಕ್ರಂ ಮೇಲೆ ಮಂಗಳವಾರ ರಾತ್ರಿ ಬಸವೇಶ್ವರನಗರದಲ್ಲಿ ಹಲ್ಲೆ ನಡೆದಿದೆ. ಸುಮಾರು 8 ಜನರ ಗ್ಯಾಂಗ್ ಹಲ್ಲೆ ಮಾಡಿದ್ದು, ಸ್ವಿಫ್ಟ್ ಕಾರು, 50 ಸಾವಿರ ರೂ. ನಗದು ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ ಬಸವೇಶ್ವರನಗರದ ಪುಣ್ಯ ಆಸ್ಪತ್ರೆಯಲ್ಲಿ ಕಾರ್ತಿಕ್ ವಿಕ್ರಂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ರಾತ್ರಿ ಎರಡು ಕಾರುಗಳ ನಡುವೆ ಟಚ್ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಈ ಬಗ್ಗೆ ಕಂಟ್ರೋಲ್ ರೂಂಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ತಿಳಿದ ತಕ್ಷಣ ಬಸವೇಶ್ವರನಗರ ಪೊಲೀಸರು ಸ್ಥಳಕ್ಕೆ ಹೋಗಿದ್ದರು. ಆದರೆ ಸ್ಥಳದಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ನಟ ಕಾರ್ತಿಕ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳಿರೋದ್ರಿಂದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *