2 ಕಂಟೈನರ್ ಲಾರಿ, KSRTC ಬಸ್, 3 ಕಾರ್ ಗಳ ನಡುವೆ ಅಪಘಾತ – ಮೂವರು ದುರ್ಮರಣ

ಬೆಂಗಳೂರು: ಭೀಕರ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಪಟ್ಟಣದ ನವಯುಗ ಟೋಲ್ ಬಳಿ ಸಂಭವಿಸಿದೆ.

ಗುರುದೇವ್, ಮಾಲೂರು ಸಮೀಪದ ತೋರೆಹಳ್ಳಿಯ ಮಂಜುನಾಥ್, ದೊಡ್ಡಕಲ್ಲಸಂದ್ರದ ಶ್ರೀನಿವಾಸ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರು ತುಮಕೂರು ಜಿಲ್ಲೆಯ ಕುಣೆಗಲ್‍ನಲ್ಲಿ ಜಾತ್ರೆ ಮುಗಿಸಿಕೊಂಡು ಬೆಂಗಳೂರಿನತ್ತ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ.


ಎರಡು ಕಂಟೈನರ್ ಲಾರಿ, ಒಂದು ಕೆಎಸ್‍ಆರ್ ಟಿಸಿ ಬಸ್ ಹಾಗೂ ಮೂರು ಕಾರು ನಡುವೆ ಈ ಅಪಘಾತ ನಡೆದಿದ್ದು, ಕಂಟೈನರ್ ಲಾರಿ ಚಾಲಕ ಪಾನಮತ್ತನಾಗಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ಕು ಜನರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯಿಂದ ಕೆಲಕಾಲ ಬೆಂಗಳೂರು-ತುಮಕೂರು ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಟ್ರಾಫಿಕ್ ಕ್ಲಿಯರ್ ಮಾಡಿ, ಪಾನಮತ್ತ ಕಂಟೈನರ್ ಲಾರಿಯ ಚಾಲಕನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *