ಬೆಂಗಳೂರು: ಪೊಲೀಸರ ಮೇಲೆ ಹಾಡಹಗಲೇ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಓರ್ವ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಪಕ್ಷದಿಂದ ಅಮಾನತು ಮಾಡುವಂತೆ ಈಗಾಗಲೇ ಸೂಚನೆ ನೀಡಿರುವುದಾಗಿ ಬಿಜೆಪಿ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.

ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿಸದಂತೆ ಆರೋಪಿಗಳಲ್ಲಿ ಒಬ್ಬನಾದ ಸಂದೀಪ್, ಶಾಸಕ ಅರವಿಂದ ಲಿಂಬಾವಳಿ ಬೆಂಬಲಿಗನಾಗಿದ್ದಾನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅಶೋಕ್, ಆರೋಪಿ ಸಂದೀಪ್, ಗುಂಡೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನಾಗಿದ್ದಾನೆ. ಹೀಗಾಗಿ ಆತನನ್ನು ಪಕ್ಷದಿಂದ ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಅಂದ್ರು. ಇದನ್ನೂ ಓದಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ- ಪುಡಿರೌಡಿಗಳ ಅಟ್ಟಹಾಸಕ್ಕೆ ಓಡಿಹೋದ ಪೇದೆಗಳು

ಉಳಿದ ಮೂವರು ಆರೋಪಿಗಳು ಯಾವ ಪಕ್ಷದವರು ಅಂತಾ ಗೃಹಸಚಿವರು ಸ್ಪಷ್ಟಪಡಿಸಬೇಕು. ಆ ಮೂವರು ಕಾಂಗ್ರೆಸ್ ನವರು ಅಂತಾ ಹೇಳಲಾಗ್ತಿದೆ. ಅವರ ಹೆಸರು ಯಾಕೆ ಹೇಳ್ತಿಲ್ಲ ಅಂತ ಪ್ರಶ್ನಿಸಿದ್ರು.
ಪೊಲೀಸರ ಮೇಲಿನ ಹಲ್ಲೆಗಳನ್ನು ನೋಡಿದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗಿದೆ ಅನ್ನೋದು ಗೊತ್ತಾಗುತ್ತೆ. ಯಾರೇ ತಪ್ಪು ಮಾಡಿದ್ರು, ಅದು ತಪ್ಪು. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಅಂತ ಅವರು ಹೇಳಿದ್ದಾರೆ.

ನಗರದ ವರ್ತೂರು ಮುಖ್ಯರಸ್ತೆಯ ಸಿದ್ದಾಪುರ ಬಳಿ ಭಾನುವಾರ ಪೇದೆಗಳಾದ ಬಸಪ್ಪ ಗಾಣೆಗಾರ, ಶರಣಬಸಪ್ಪ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕುಡಿತ ಮತ್ತಿನಲ್ಲಿದ್ದ ಗ್ಯಾಂಗ್ ಪೊಲೀಸರ ಮೇಲೆಯೇ ಹಾಡಹಗಲೇ ಹಲ್ಲೆ ನಡೆಸಿವೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕುಮಾರ್, ಸುದೀಪ್, ಮೂರ್ತಿ, ಮುರಳಿ ಮೋಹನ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
https://www.youtube.com/watch?v=6caEcDoIStw
https://www.youtube.com/watch?v=DrZ-G_iCIfI

Leave a Reply