ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಎಲೆಕ್ಷನ್

– ಉತ್ತರಪ್ರದೇಶದಲ್ಲಿ ಜೇಟ್ಲಿ ಸ್ಪರ್ಧೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಇವತ್ತು ಮತದಾನ ನಡೆಯಲಿದೆ. ವಿಧಾನಸೌಧದ ಮೊದಲನೇ ಮಹಡಿಯ ಸಮಿತಿ ಕೊಠಡಿಯಲ್ಲಿ ಬೆಳಗ್ಗೆ 9 ರಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ.

ಸಂಜೆ ನಾಲ್ಕರ ನಂತರ ಮತ ಎಣಿಕೆ ನಡೆಯಲಿದ್ದು, ಸಂಜೆ 6 ಗಂಟೆಯೊಳಗೆ ಫಲಿತಾಂಶ ಹೊರಬೀಳಲಿದೆ. ಮೂರು ಪಕ್ಷಗಳಿಂದ ಐವರು ಅಖಾಡದಲ್ಲಿದ್ದಾರೆ. ಕಾಂಗ್ರೆಸ್‍ನಿಂದ ಹನುಮಂತಯ್ಯ, ನಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್. ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ಹಾಗೂ ಜೆಡಿಎಸ್‍ನಿಂದ ಬಿ.ಎಂ. ಫಾರೂಕ್ ಕಣದಲ್ಲಿದ್ದಾರೆ.

 

ರಾಜ್ಯಸಭಾ ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗೆ 45 ಮತ ಬೇಕು. ಕಾಂಗ್ರೆಸ್‍ನ ಇಬ್ಬರು ಅಭ್ಯರ್ಥಿಗಳ ಗೆಲುವು ಪಕ್ಕಾ ಆಗಿದೆ. ಅಲ್ಲದೆ ಬಿಜೆಪಿಯ ರಾಜೀವ್ ಚಂದ್ರಶೇಖರ್ ಗೆಲುವು ಬಹುತೇಕ ಖಚಿತ ಎನ್ನಲಾಗ್ತಿದೆ. ಆದ್ರೆ ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್‍ನ ಜಿ.ಸಿ.ಚಂದ್ರಶೇಖರ್ ಮತ್ತು ಜೆಡಿಎಸ್‍ನ ಫಾರೂಕ್ ನಡುವೆ ಪೈಪೋಟಿ ಇದೆ. ಕಾಂಗ್ರೆಸ್ ಪಕ್ಷೇತರ ಮತಗಳು, ಜೆಡಿಎಸ್‍ನ 7 ಬಂಡಾಯ ಶಾಸಕರ ಮತಗಳನ್ನ ನೆಚ್ಚಿಕೊಂಡಿದ್ದು, ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ.

ಉತ್ತರಪ್ರದೇಶದಲ್ಲೂ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, ಕೇಂದ್ರ ಸಚಿವ ಅರುಣ್ ಜೇಟ್ಲಿ ಕಣದಲಿದ್ದಾರೆ. ಇಲ್ಲಿ 10 ಸ್ಥಾನಗಳು ಬೇಕಾಗಿದ್ದು 11 ಮಂದಿ ಕಣದಲ್ಲಿದ್ದಾರೆ.

Comments

Leave a Reply

Your email address will not be published. Required fields are marked *