ಪೊಲೀಸ್ ಅಧಿಕಾರಿಗಳ ಮೇಲೆ ಚುನಾವಣಾ ಆಯೋಗದ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ಚುನಾವಣಾ ಅಧಿಕಾರಿಗಳು, ರಾಜಕೀಯ ನಾಯಕರು ಸೇರಿದಂತೆ ಎಲ್ಲ ವಿಭಾಗಗಳ ಮೇಲೆಯೂ ಕಣ್ಣಿಟ್ಟಿದ್ದಾರೆ. ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡುವ ಮೂಲಕ ದಾಖಲೆಯಿಲ್ಲದ ಅಪಾರ ಹಣವನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ. ಸದ್ಯ ಪೊಲೀಸ್ ಅಧಿಕಾರಿಗಳ ಮೇಲೆಯೂ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ.

ಕೆಲ ಪೊಲೀಸ್ ಅಧಿಕಾರಿಗಳು ಚುನಾವಣೆಯಲ್ಲಿ ಸ್ಪರ್ಧಿಸುವವರಿಗೆ ಸಹಕಾರ ನೀಡ್ತಾರೆ ಅಂತಾ ಆರ್‍ಟಿಐ ಕಾರ್ಯಕರ್ತ ಹನುಮೇಗೌಡ ಎಂಬವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ ಕ್ಷಣದಿಂದ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಪೊಲೀಸ್ ಅಧಿಕಾರಿಗಳು ಪ್ರತಿನಿತ್ಯ ದಿನಚರಿ ಬರೆಯಬೇಕು.

ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ದಿನಚರಿ ಬಗ್ಗೆ ಎಚ್ಚರಿಸಿ ಚುನಾವಣಾ ಆಯೋಗ ಪತ್ರ ಬರೆದಿದೆ. ಚುನಾವಣಾ ನೀತಿ ಸಂಹಿತೆಯಲ್ಲಿ ಪೊಲೀಸ್ ಅಧಿಕಾರಿಗಳು ದಿನಚರಿ ಬರೆಯಬೇಕೆಂಬ ಅಂಶವಿದೆ. ಆದ್ರೆ ಇಲ್ಲಿಯವರೆಗೂ ಈ ನಿಯಮವನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಬಾರಿ ಪೊಲೀಸ್ ಅಧಿಕಾರಿಗಳ ದಿನಚರಿ ಬಗ್ಗೆ ಚುನಾವಣಾ ಆಯೋಗ ಎಚ್ಚರಿಸಿದೆ.

Comments

Leave a Reply

Your email address will not be published. Required fields are marked *