ಅತ್ಯಾಚಾರಿಗಳಿಗೆ ಉಳಿಗಾಲವಿಲ್ಲ, ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ- ಪ್ರಧಾನಿ ಮೋದಿ

ನವದೆಹಲಿ: ಉತ್ತರ ಪ್ರದೇಶ ಉನ್ನಾವೋ ಹಾಗೂ ಜಮ್ಮು ಕಾಶ್ಮೀರದ ಕಥುವಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಶ್ವಾಸನೆ ನೀಡಿದ್ದಾರೆ.

ಇಂತಹ ಅಮಾನವೀಯ ಘಟನೆಗಳನ್ನು ಕೆಂಪು ಕೋಟೆ ಮೇಲೆ ನಿಂತು ಯುವಕರನ್ನು ಪ್ರಶ್ನಿಸುವ ಧೈರ್ಯ ತಮಗಿದೆ. ಆದರೆ ಸಾಮಾಜದಲ್ಲಿ ನಮಗೆ ಸಾಮಾಜಿಕ ಮೌಲ್ಯ, ಕುಟುಂಬ ಸಂದರ್ಭಗಳನ್ನು ಬಲಪಡಿಸುವ ಅಗತ್ಯವಿದೆ. ಇದರಿಂದ ಮಾತ್ರ ಅಂಬೇಡ್ಕರ್ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ. ಆದರೆ ಇಂತಹ ಘಟನೆಗಳು ಮನಸ್ಸಿನ ಮನೋಬಲವನ್ನು ಕದಲಿಸುತ್ತವೆ ಎಂದು ಹೇಳಿ ಘಟನೆ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ಅಂಬೇಡ್ಕರ್ ಅವರು ಬದುಕ್ಕಿದ್ದ ವೇಳೆ ಅವರನ್ನು ಸರಿಯಾಗಿ ನಡೆಸಿಕೊಳ್ಳದ ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರ ಸಾವಿನ ನಂತರವೂ ಅವರಿಗೆ ಅವಮಾನ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಎಸ್‍ಟಿ/ಎಸ್‍ಸಿ ಮೇಲಿನ ದೌರ್ಜನ್ಯ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಶಾಸಕರನ್ನು ಬಂಧಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕ್ರಮಕೈಗೊಂಡಿರುವ ಸಿಬಿಐ ಅಧಿಕಾರಿಗಳು ಶಾಸಕ ಕುಲದೀಪ್ ಸಿಂಗ್ ಸೆಂಗರ್‍ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಸುಪ್ರೀಂನ ಮುಖ್ಯ ನ್ಯಾಯಮೂರ್ತಿ ದಿಲೀಪ್ ಬಡಾಸಾಹೇಬ್ ಭೋಸ್ಲೆ, ನ್ಯಾಯಮೂರ್ತಿ ಸುನೀತ್ ಕುಮಾರ್ ಘಟನೆ ಸಂಬಂಧ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿದರು.

ಇತ್ತ ಕಾಶ್ಮೀರದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಜಮ್ಮು ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಚೌದರಿ ಲಾಲ್ ಸಿಂಗ್ ಹಾಗೂ ಕೈಗಾರಿಕೋದ್ಯಮ ಸಚಿವರಾಗಿದ್ದ ಚಂದ್ರ ಶೇಖರ್ ಗಂಗಾ ತಮ್ಮ ಸ್ಥಾನಗಳಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದೆ. ಇದರ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರದಿಂದ ಸಿಎಂ ಮೆಹಬೂಬಾ ಮುಫ್ತಿ ಹಿಂದೆ ಸರಿಯುವ ಕುರಿತು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *