ನಾಳೆ ಬಳ್ಳಾರಿಗೆ ಬರಲಿದ್ದಾರೆ ಚುನಾವಣಾ ಚಾಣಕ್ಯ ಅಮಿತ್ ಶಾ!

ಬಳ್ಳಾರಿ: ಬಿಜೆಪಿ ನಡೆಸುತ್ತಿರುವ ಕರುನಾಡ ಯಾತ್ರೆ ಅಂಗವಾಗಿ ನಾಳೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗಣಿನಗರಿ ಬಳ್ಳಾರಿಗೆ ಭೇಟಿ ನೀಡಲಿದ್ದಾರೆ.

ಈ ಕುರಿತು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಅಮಿತ್ ಶಾ ಅವರು ನಾಳೆ ಬೆಳಗ್ಗೆ 10.30ರ ಸುಮಾರಿಗೆ ನಗರದ ಅಧಿದೇವತೆ ಕನಕದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ತದನಂತರ ಕನಕದುರ್ಗಮ್ಮ ದೇವಸ್ಥಾನದಿಂದ ಬೆಂಗಳೂರು ರಸ್ತೆವರೆಗೆ ನಡೆಯುವ ರೋಡ್ ಶೋನಲ್ಲಿ ಭಾಗಿಯಾಗಿ ಬಿಜೆಪಿ ಪರ ಮತ ಯಾಚನೆ ನಡೆಸಲಿದ್ದಾರೆ. ಈ ಸಂದರ್ಭ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಜಿಲ್ಲಾ ಬಿಜೆಪಿ ಮುಖಂಡರು, ನಗರ ಕ್ಷೇತ್ರದ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ, ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಸಣ್ಣಫಕೀರಪ್ಪ ಸಾಥ್ ನೀಡಲಿದ್ದಾರೆ.

ತದನಂತರ ಅಮಿತ್ ಶಾ ಮತ್ತು ಬಿಎಸ್ ವೈ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಜಿಲ್ಲೆಯ ಕುಕನೂರಿನಲ್ಲಿ ಮಧ್ಯಾಹ್ನ 4 ಗಂಟೆಗೆ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

https://twitter.com/BSYBJP/status/989300581993984000

Comments

Leave a Reply

Your email address will not be published. Required fields are marked *