ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಳಿಕ ಬಿಜೆಪಿಯ ನಡೆ ನಿಗೂಢ!

ಬೆಂಗಳೂರು: ರಾಜ್ಯ ಚುನಾವಣಾ ಫಲಿತಾಂಶದ ಬಳಿಕ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ ನಡೆ ಏನೆಂಬುದರ ಬಗ್ಗೆ ತೀವ್ರ ಕೂತುಹಲವನ್ನು ಹುಟ್ಟುಹಾಕಿದೆ.

ಆಪರೇಷನ್ ಕಮಲ ಮಾಡಲು ಮುಂದಾಗಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ದಕ್ಷಿಣ ಭಾರತದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಶತಾಗತಯ ಪ್ರಯತ್ನ ಮಾಡುತ್ತಿದೆ. ಇತ್ತ ರಾಜ್ಯಪಾಲರ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚನೆಗೆ ಎರಡು ದಿನಗಳ ಕಾಲಾವಕಾಶ ಕೋರಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್-ಜೆಡಿಎಸ್ ನಾಯಕರ ನಿಯೋಗ ಜೊತೆಯಾಗಿ ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿವೆ.

ಸರ್ಕಾರ ರಚಿಸಲು ಬಿಜೆಪಿಯ ಮುಂದಿನ ನಡೆ ಏನು?
* ದೊಡ್ಡ ಪಕ್ಷವಾಗಿದ್ದಕ್ಕೆ ಸರ್ಕಾರ ರಚನೆಗೆ ಅವಕಾಶ ಕೋರಿಕೆ.
* ಒಂದು ವಾರದೊಳಗೆ ಸಂಖ್ಯಾಬಲವನ್ನು ಹೊಂದಿಸಲು ಯತ್ನ.
* ಸರ್ಕಾರ ರಚಿಸಿದ ಬಳಿಕ ಬಹುಮತ ಸಾಬೀತುಪಡಿಸಲು ತೆಗೆದುಕೊಳ್ಳಬಹುದು.
* ಬಹುಮತ ಸಾಬೀತಿನ ಸಮಯದಲ್ಲಿ ಜೆಡಿಎಸ್- ಕಾಂಗ್ರೆಸ್‍ನ 15ಕ್ಕೂ ಹೆಚ್ಚು ಶಾಸಕರು ಗೈರಾಗುವಂತೆ ನೋಡಿಕೊಳ್ಳುವುದು.
* ಸಾಂವಿಧಾನಿಕ ಮತ್ತು ಕಾನೂನಾತ್ಮಕವಾಗಿ ಮುಂದಿನ ಹೆಜ್ಜೆ.
* ಸುಪ್ರೀಂಕೋರ್ಟ್ ಆದೇಶವನ್ನು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಲ್ಲೇಖ.
* ಜೆಡಿಎಸ್ ಅಥವಾ ಕಾಂಗ್ರೆಸ್ ಶಾಸಕರಿಗೆ ಗಾಳ..?
* ಮುಖ್ಯವಾಗಿ ಲಿಂಗಾಯತ ಶಾಸಕರನ್ನು ಸೆಳೆಯಲು ಪ್ಲಾನ್.
* ಜೆಡಿಎಸ್- ಕಾಂಗ್ರೆಸ್ ಮೈತ್ರಿಗೆ ಅಸಮಾಧಾನ ತೋರುವವರ ಮೇಲೆ ಕಣ್ಣು.
* ಜೆಡಿಎಸ್- ಕಾಂಗ್ರೆಸ್ ಸಂಧಾನದವರೆಗೆ ಕಾದು ನೋಡುವ ತಂತ್ರ.

Comments

Leave a Reply

Your email address will not be published. Required fields are marked *