ಹಿಂಬಾಗಿಲಿನ ಮೂಲಕ ಬಿಎಸ್‍ವೈ ಮನೆಗೆ ಎಂಟ್ರಿ ಕೊಟ್ಟ ಪಕ್ಷೇತರ ಶಾಸಕ

ಬೆಂಗಳೂರು: ವಿಧಾನ ಸಭಾ ಚುನಾವಣಾ ಫಲಿತಾಂಶದ ಬಳಿಕ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ ನಡೆ ಏನೆಂಬುದರ ಬಗ್ಗೆ ತೀವ್ರ ಕೂತುಹಲವನ್ನು ಹುಟ್ಟುಹಾಕಿದೆ.

ಇಂದು ಕೂಡ ಬೆಳ್ಳಂಬೆಳಗ್ಗೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಪಕ್ಷೇತರ ಶಾಸಕ ಶಂಕರ್ ರನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮನೆಗೆ ಈಶ್ವರಪ್ಪ ಕರೆದುಕೊಂಡು ಬಂದಿದ್ದಾರೆ.

ರಾಣೆಬೆನ್ನೂರು ನೂತನ ಶಾಸಕ ಆರ್.ಶಂಕರ್ ಬಿಎಸ್ ವೈ ನಿವಾಸಕ್ಕೆ ಹಿಂಬಾಗಿಲಿನಿಂದ ಆಗಮಿಸಿದ್ದಾರೆ. ಇವರನ್ನು ಈಶ್ವರಪ್ಪ ಕರೆತಂದಿದ್ದು, ಈಶರಪ್ಪ ಮಾತ್ರ ಮುಂಬಾಗಿಲಿನಿಂದ ಬಂದಿದ್ದಾರೆ. ಅಷ್ಟೇ ಅಲ್ಲದೇ ಇವರು ಈಶ್ವರಪ್ಪ ಸಂಬಂಧಿಯೂ ಕೂಡ ಆಗಿದ್ದಾರೆ. ಇಂದು ಸುಮಾರು 8 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಎಲ್ಲ ನೂತನ ಶಾಸಕರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಆಹ್ವಾನ ಕೊಟ್ಟಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ರಾಜ್ಯಪಾಲರನ್ನ ಮತ್ತೊಮ್ಮೆ ಭೇಟಿ ಮಾಡಲು ಕಾಂಗ್ರೆಸ್ ಜೆಡಿಎಸ್ ತೀರ್ಮಾನ ಮಾಡಿದೆ. ರಾಜ್ಯಪಾಲರು ಬಹುಮತ ಸಾಬೀತು ಪಡಿಸಲು ಅವಕಾಶ ನೀಡದಿದ್ದರೆ. ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಕೇರಳದ ಕೊಚ್ಚಿನ್ ರೆಸಾರ್ಟ್ ಗೆ ಶಿಫ್ಟ್ ಆಗಲು ಕಾಂಗ್ರೆಸ್ ತೀರ್ಮಾನ ಮಾಡಿದ್ದು, ಪ್ರತ್ಯೇಕ ಬಸ್ ಮೂಲಕ ಕಾಂಗ್ರೆಸ್ ನಾಯಕರು ಕೊಚ್ಚಿನ್ ಗೆ ಶಿಫ್ಟ್ ಆಗುವ ಸಿದ್ಧತೆ ನಡೆಯುತ್ತಿದೆ ಎಂದು ಪಬ್ಲಿಕ್ ಟಿವಿ ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ರಾಜ್ಯದ ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ದೂರ ತಳ್ಳಿದ್ದಾರೆ. ರಾಜ್ಯದ ಜನ ಬಿಜೆಪಿಗೆ ದೊಡ್ಡ ಬೆಂಬಲ ನೀಡಿದ್ದಾರೆ. ಕಾಂಗ್ರ್ರೆಸ್ ಮತ್ತು ಜೆಡಿಎಸ್ ಹಿಂಬಾಗಿಲಿನಿಂದ ಸರ್ಕಾರ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ಯಾವುದೇ ಶಾಸಕರನ್ನ ಸಂಪರ್ಕಿಸಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರೇ ನಮ್ಮನ್ನ ಸಂಪರ್ಕಿಸಿದ್ದಾರೆ. ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಬೇಕಿಲ್ಲ. ಅವರಾಗಿ ಬಂದಿದ್ದಾರೆ. ಯಾರು ಎಷ್ಟು ಅಂತಾ ಈಗ ಹೇಳಲ್ಲ. ಆದರೆ ಶಾಸಕ ಶಂಕ್‍ರ್ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ.

Comments

Leave a Reply

Your email address will not be published. Required fields are marked *