ಇಂದು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ

ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದ 27ನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 9 ಗಂಟೆಗೆ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

ಬುಧವಾರ ಇಡೀ ದಿನ ಹೈಡ್ರಾಮಾದ ಬಳಿಕ ಕೇಂದ್ರ ಅಟಾರ್ನಿ ಜನರಲ್ ರೋಹಟಗಿ ಅಭಿಪ್ರಾಯ ಸಂಗ್ರಹಿಸಿ ರಾತ್ರಿ 8.05ರ ಹೊತ್ತಿಗೆ ರಾಜಭವನದಿಂದ ಅಧಿಕೃತ ಪ್ರಕಟಣೆ ಹೊರಬಿತ್ತು. ಇನ್ನು ಬಹುಮತ ಸಾಬೀತಿಗೆ 15 ದಿನಗಳ ಅವಕಾಶವನ್ನು ರಾಜ್ಯಪಾಲರು ಕೊಟ್ಟಿದ್ದಾರೆ. ಇದನ್ನೂ ಓದಿ: ಕೆಲ ದಿನ ಮಾತ್ರ ಬಿಜೆಪಿಯವರಿಗೆ ಸಂತೋಷ: ಎಚ್‍ಡಿಕೆ

ಬಿ.ಎಸ್.ಯಡಿಯೂರಪ್ಪ ಜೊತೆಗೆ 4 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶ್ರೀರಾಮುಲು, ಗೋವಿಂದ ಕಾರಜೋಳ, ಈಶ್ವರಪ್ಪ, ಆರ್.ಅಶೋಕ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇದನ್ನೂ ಓದಿ: ಸರ್ಕಾರ ರಚನೆಗೂ ಮೊದಲೇ ಉಗ್ರ ‘ಪ್ರತಾಪ’ ತೋರಿದ ‘ಸಿಂಹ’

ಸರ್ಕಾರ ರಚನೆಗೆ ರಾಜ್ಯಪಾಲರು ನೀಡಿದ್ದ ಆಹ್ವಾನಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಪ್ರಜಾಪ್ರಭುತ್ವ ಭಾರತದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚನೆ ಬಗ್ಗೆ ಮಧ್ಯರಾತ್ರಿ 2 ಗಂಟೆಗೆ ಶುರುವಾದ ವಾದ-ಪ್ರತಿವಾದ ತೀರ್ಪು ನಸುಕಿನ ಜಾವ 5.40ಕ್ಕೆ ಹೊರಬಿತ್ತು. ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸಮಾರಂಭಕ್ಕೆ ತಡೆಯಾಜ್ಞೆ ನೀಡಲು ಕೋರ್ಟ್ ನಿರಾಕರಿಸಿತು.

Comments

Leave a Reply

Your email address will not be published. Required fields are marked *