ಅರಣ್ಯದಲ್ಲಿ ಆನೆಗಳ ಜೊತೆ ಚಾಲೆಂಜಿಂಗ್ ಸ್ಟಾರ್ ರಿಲ್ಯಾಕ್ಸ್ ಮೂಡ್!

ಬೆಂಗಳೂರು: ಅರಣ್ಯ ಇಲಾಖೆಯ ಪ್ರಚಾರ ರಾಯಭಾರಿ ಆಗಿರುವ ನಟ ದರ್ಶನ್ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿ ಕಾಲ ಕಳೆಯುತ್ತಿದ್ದಾರೆ.

ಮೈಸೂರಿನ ಕಬಿನಿ ಹಿನ್ನೀರಿನ ಅರಣ್ಯದಲ್ಲಿ ಆನೆ ಜೊತೆ ಹಾಗೂ ಕಾಡಿನ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ. ಇಂದು ಬೆಳಗ್ಗೆ ಸಫಾರಿಗೆ ಹೋದ ದರ್ಶನ್, ಕೈಯಲ್ಲಿ ಕ್ಯಾಮೆರಾ ಹಿಡಿದು ಪ್ರಕೃತಿ ಸೌಂದರ್ಯ ಹಾಗೂ ತಮಗೆ ಎದುರಾಗುವ ಕಾಡು ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದರು.

ಸದ್ಯ ಚಿತ್ರೀಕರಣದಿಂದ ದರ್ಶನ್ ಬ್ರೇಕ್ ತೆಗೆದುಕೊಂಡಿದ್ದಾರೆ. ದರ್ಶನ್ ಬಿಡುವಿನ ಸಮಯದಲ್ಲಿ ಮೈಸೂರಿನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದು, ಕಳೆದ ಎರಡು ದಿನಗಳಿಂದ ಮೈಸೂರಿನಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಪ್ರಾಣಿ ಪಕ್ಷಿಗಳನ್ನು ತುಂಬಾನೇ ಇಷ್ಟಪಡುವ ಅವರು, ಮೈಸೂರಿನ ತನ್ನ ಫಾರ್ಮ್ ಹೌಸ್‍ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿದ್ದಾರೆ. ಪ್ರಾಣಿ ಹಾಗೂ ಪರಿಸರ ಮೇಲಿರುವ ಪ್ರೀತಿಯನ್ನು ಕಂಡು ದರ್ಶನ್ ಅವರನ್ನು ಮೈಸೂರು ಮೃಗಾಲಯದ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ.

ದರ್ಶನ್ ತಮ್ಮದೇ ಫಾರ್ಮ್‍ನಲ್ಲಿ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಅಲ್ಲದೇ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹುಲಿ ಮತ್ತು ಆನೆ ಪ್ರಾಣಿಗಳನ್ನು ದತ್ತು ಪಡೆದು ಆ ಪ್ರಾಣಿಗಳ ಪಾಲನೆಗೆ ಸಹಾಯ ಮಾಡುತ್ತಿದ್ದಾರೆ.

https://twitter.com/DarshanTrends/status/1011628239977000960

 

Comments

Leave a Reply

Your email address will not be published. Required fields are marked *