ಪ್ರಧಾನಿ, ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಬಾರಿ ಆಯ್ಕೆ ಅವಧಿ ನಿಗದಿಪಡಿಸಿ -`ಕೈ’ ಮುಖಂಡ ಸಿಂಧಿಯಾ

ನವದೆಹಲಿ: ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಹುದ್ದೆಗೆ ಒಬ್ಬ ವ್ಯಕ್ತಿ ಎಷ್ಟು ಬಾರಿ ಆಯ್ಕೆ ಮಾಡಬಹುದು ಎಂಬುವುದನ್ನು ನಿಗದಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ, ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಮಹಾರಾಷ್ಟ್ರ ಗುನಾ ಲೋಕಾಸಭಾ ಕ್ಷೇತ್ರದ ಸಂಸದರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಹೆಚ್ಚಿನ ಅವಧಿ ನೇಮಕ ಹಾಗೂ ರಾಜ್ಯ ಸರ್ಕಾರಗಳು ನಿಗಧಿ ಮಾಡಿರುವ ನಿವೃತ್ತಿ ವಯಸ್ಸಿನ ಕುರಿತ ಪ್ರಶ್ನೆಗೆ ಉತ್ತರಿಸಿ, ಅಮೆರಿಕಲ್ಲಿ 2 ಅವಧಿಗೆ ಅಧ್ಯಕ್ಷರಾಗಲು ಅವಕಾಶವಿದ್ದು, ಇಂತಹ ನಿಯಮವನ್ನು ನಾವು ನಿಗಧಿ ಮಾಡಬೇಕಿದೆ ಎಂದು ಹೇಳಿದ್ದಾರೆ. ಅಲ್ಲದೇ ಯಾವುದೇ ಒಬ್ಬ ವ್ಯಕ್ತಿ ವೃತ್ತಿ ಜೀವನದ ಅಂಚಿನಲ್ಲಿದ್ದರೆ ಆತನ ಸ್ಥಾನಕ್ಕೆ ಉತ್ತಮ ವ್ಯಕ್ತಿಯನ್ನು ನೇಮಿಸುವ ಹಾಗೇ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಹುದ್ದೆಗಳನ್ನು ಆಕ್ರಮಿಸಿಕೊಂಡಿರುವ ಜನರ ಅಧಿಕಾರಾವಧಿಗಳನ್ನು ಸಹ ನಿಗದಿಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.

ನಿವೃತ್ತ ಸರ್ಕಾರಿ ಅಧಿಕಾರಿಗಳನ್ನು ಮತ್ತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೇಮಕ ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅಂತಹ ಅಧಿಕಾರಿಗಳು ನೇಮಕವಾದರೆ ಪಿತೂರಿ ನಡೆಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರ ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು, ಸರ್ಕಾರದ ರೈತರ ಆತ್ಮಹತ್ಯೆಗಳು ಹಾಗೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯಲು ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಭೋಪಾಲ್ ನಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ರೇಪ್ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *