ಹೈದ್ರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು- ಸಹಿ ಸಂಗ್ರಹಕ್ಕೆ ಮುನ್ನವೇ ಹೋರಾಟಗಾರರು ವಶಕ್ಕೆ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯ ಬೇಕು ಅಂತ ಆಗ್ರಹಿಸಿ ಕಲಬುರಗಿಯಲ್ಲಿ ಸಹಿ ಸಂಗ್ರಹಕ್ಕೂ ಮುನ್ನ ಮುಂಜಾಗ್ರತಾ ಕ್ರಮವಾಗಿ 30ಕ್ಕೂ ಹೆಚ್ಚು ಮಂದಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೊಸ ದಕ್ಷಿಣ ಕರ್ನಾಟಕವೂ ಬೇಡ. ಮುಂಬೈ ಕರ್ನಾಟಕವೂ ಬೇಡ. ನಮಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಕು ಅಂತ ಇಂದು ಲಕ್ಷ ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲು ಮುಂದಾಗಿದ್ದರು. ಈಗ ಹೋರಾಟಗಾರರನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.

ಕಲಬುರಗಿಯ ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಮ್ ಎಸ್ ಪಾಟೀಲ್ ನೇತೃತ್ವದಲ್ಲಿ ಮಠಾಧೀಶರು, ವಕೀಲರು, ವೈದ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಯಿತು.

ಉತ್ತರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಬಂದ್‍ಗೆ ಯಾವುದೇ ಸಂಘಟನೆಗಳ ಬೆಂಬಲ ನೀಡಲಿಲ್ಲ. ಎಂದಿನಂತೆ ಸಾರಿಗೆ ಸಂಚಾರ, ಜನಜೀವನ, ಅಂಗಡಿ ಮುಂಗಟ್ಟುಗಳನ್ನ ವ್ಯಾಪಾರಸ್ಥರು ತೆರೆದಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

Comments

Leave a Reply

Your email address will not be published. Required fields are marked *