ಲೋಕಸಭಾ ಚುನಾವಣೆ- ಹಾಲಿ ಸಂಸದರಿಗೆ ಟಿಕೆಟ್ ಬಹುತೇಕ ಖಚಿತ: ಬಿಎಸ್‍ವೈ

ಗದಗ: ಹಾಲಿ ಸಂಸದರಿಗೆ ಲೋಕಸಭಾ ಟಿಕೆಟ್ ಬಹುತೇಕ ಖಚಿತವೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸುಮಾರು 22 ರಿಂದ 23 ಲೋಕಸಭಾ ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಹಾಲಿಯಿರುವ ಎಲ್ಲಾ ಸಂಸದರಿಗೂ ಸಹ ಲೋಕಸಭಾ ಚುನಾವಣೆಯ ಟಿಕೆಟ್ ಬಹುತೇಕ ಖಚಿತವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ 17 ಜನ ಬಿಜೆಪಿ ಸಂಸತ್ ಸದಸ್ಯರಿದ್ದಾರೆ. ಇನ್ನುಳಿದ 11 ಕಡೆಗೆ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣೆಗೆ ನಿಲ್ಲಿಸುತ್ತೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ರಿಂದ 23 ಸ್ಥಾನ ಗೆಲ್ಲಲು ಪ್ರವಾಸ ಕೈಗೊಳ್ಳುತ್ತೇನೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಟ್ಟಿ ಬಿಡುಗಡೆಗೂ ನಮಗೂ ಸಂಬಂಧವಿಲ್ಲ. ಸ್ಥಳೀಯ ಸಂಸ್ಥೆಗಳ ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ಸಸಿಗಳಿಗೆ ನೀರು ಹಾಕುವ ಮೂಲಕ ಬಿಎಸ್‍ವೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಶಿವಕುಮಾರ ಉದಾಸಿ, ಗದಗ ಜಿಲ್ಲೆಯ ಶಾಸಕರುಗಳಾದ ಸಿ.ಸಿ ಪಾಟೀಲ್, ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಎಸ್.ವಿ ಸಂಕನೂರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Comments

Leave a Reply

Your email address will not be published. Required fields are marked *