ಪೊಲೀಸ್ ಠಾಣೆಯಲ್ಲಿ ರಕ್ಷಾ ಬಂಧನ

ಧಾರವಾಡ: ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ರಕ್ಷಾ ಬಂಧನವನ್ನ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ.

ನಗರದ ಶಿವಾನಂದನಗರದ ಕಲ್ಪತರು ಮಹಿಳಾ ಸಂಘದ ವತಿಯಿಂದ ಆಯೋಜಿಸಿದ್ದ ರಾಖಿ ಹಬ್ಬದ ಈ ಕಾರ್ಯಕ್ರಮದಲ್ಲಿ ಎಸ್‍ಪಿ ಸಂಗೀತಾ ಅವರು ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ ಸ್ಪೆಕ್ಟರ್ ಹಾಗೂ ಸಿಬ್ಬಂದಿಗೆ ರಾಖಿ ಕಟ್ಟಿದ್ದಾರೆ. ಈ ಕಾರ್ಯಕ್ರಮ ಆಯೋಜನೆ ಮಾಡಿದ್ದ ಮಹಿಳಾ ಸಂಘದವರು ಕೂಡಾ ಪೊಲೀಸ್ ಸಿಬ್ಬಂದಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಣೆ ಮಾಡಿದ್ದಾರೆ.

ಸಾಮಾನ್ಯವಾಗಿ ರಕ್ಷಾ ಬಂಧನದ ದಿನ ತಂಗಿ ಅಣ್ಣನಿಗೆ ರಾಖಿ ಕಟ್ಟುತ್ತಾರೆ. ಆದರೆ ಜಿಲ್ಲೆಯಲ್ಲಿ ಮಹಿಳೆಯರು ಪೊಲೀಸರಿಗೆ ರಾಖಿ ಕಟ್ಟುವ ಮೂಲಕ ಪೊಲೀಸ್ ಅಧಿಕಾರಿಗಳಲ್ಲೂ ಒಬ್ಬ ಅಣ್ಣನನ್ನು ಕಂಡಿದ್ದಾರೆ. ಅದೇ ರೀತಿ ಪೊಲೀಸರು ಕೂಡ ಸದಾ ಕರ್ತವ್ಯದಲ್ಲಿದ್ದು, ಎಲ್ಲ ಸಂಬಂಧದಿಂದ ದೂರು ಇರುತ್ತಾರೆ. ಆದರೆ ಈಗ ಮಹಿಳೆಯರ ಕೈಯಲ್ಲಿ ರಾಖಿ ಕಟ್ಟಿಸಿಕೊಂಡಿದ್ದು, ಸದಾ ನಿಮ್ಮನ್ನು ಕಾಪಾಡುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.

ಪೊಲೀಸ್ ಇಲಾಖೆ ಸಾರ್ವಜನಿಕರಿಂದ ದೂರ ಇದೆ ಎಂಬ ಮಾತು ಕೇಳಿ ಬರುತ್ತಿರುವ ಈ ದಿನಗಳಲ್ಲಿ, ಇಲಾಖೆ ಜನರ ಸಮೀಪದಲ್ಲಿಯೇ ಇದೆ ಎಂದು ತೋರಿಸಲು ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇವು ಎಂದು ಕಾರ್ಯಕ್ರಮ ಆಯೋಜಕರಾದ ಆರತಿ ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *