-ಬಿಜೆಪಿ ಗಾಳಿಯಲ್ಲಿ ಗುಂಡು ಹೊಡೆಯೋದನ್ನ ಬಿಡಲಿ
ಬೆಂಗಳೂರು: ಬೆಳಗಾವಿ ಸಮಸ್ಯೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಸಹ ಸಣ್ಣ-ಪುಟ್ಟ ಸಮಸ್ಯೆಗಳು ಇದ್ದೆ ಇರುತ್ತವೇ ಎಂದು ಬೆಳಗಾವಿ ಶಾಸಕ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬೆಳಗಾವಿ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಸಮಸ್ಯೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಸಣ್ಣ-ಪುಟ್ಟ ಸಮಸ್ಯೆಗಳು ಇವೆ. ಇವುಗಳನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸುತ್ತಾರೆ. ಇವತ್ತು ಅಥವಾ ನಾಳೆ ಕೆಪಿಸಿಸಿ ಅಧ್ಯಕ್ಷರು ಮತ್ತು ಜಾರಕಿಹೊಳಿ ಸಹೋದರರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ. ಅಲ್ಲದೇ ಸತೀಶ್ ಜಾರಕಿಹೊಳಿಯವರು ನಮ್ಮ ಜಿಲ್ಲೆಯಲ್ಲಿ ಬೇರೆಯವರ ಹಸ್ತಕ್ಷೇಪ ಸಹಿಸೋಲ್ಲ ಅಂತಾ ಹೇಳಿದ್ದಾರೆ. ಅವರ ಮಾತೂ ನನಗೂ ಅನ್ವಯವಾಗುತ್ತೆ. ಅಲ್ಲದೇ ಅವರು ಮೊದಲಿನಿಂದಲೂ ಸಚಿವನಾಗಬೇಕೆಂದು ಹೇಳಿಕೊಂಡು ಬಂದಿದ್ದಾರೆ ಎಂದು ಹೇಳಿದರು.

ಬಿಜೆಪಿ ಜೊತೆ ಕಾಂಗ್ರೆಸ್ಸಿನ 14 ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರೇನು ಹೇಳೋದು ನಾವು ಹೇಳುತ್ತೇವೆ, ನಮ್ಮ ಬಳಿಯು ಬಿಜೆಪಿಯ ಏಳೆಂಟು ಶಾಸಕರು ಸಂಪರ್ಕದಲ್ಲಿ ಇದ್ದಾರೆ ಅಂಥ. ಅವರು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಅತಂತ್ರ ಸೃಷ್ಟಿ ಮಾಡುವುದು ಬೇಡ. ಯಾರು ಸಂಪರ್ಕದಲ್ಲಿದ್ದಾರೆ ಅನ್ನುವುದನ್ನು ಮೊದಲು ಹೇಳಲಿ, ಅಲ್ಲದೇ ನನ್ನನ್ನು ಯಾವ ಬಿಜೆಪಿ ನಾಯಕರ ಸಂಪರ್ಕ ಮಾಡಿಲ್ಲ. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮಾತನಾಡಿ, ಎಲ್ಲಾ 78 ಶಾಸಕರು ಅರ್ಹತೆ ಇರುವವರೆ, ಯಾರನ್ನು ಆಯ್ಕೆ ಮಾಡಬೇಕೆಂದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply