ಕೊಪ್ಪಳ: ಮನೆಯಲ್ಲಿ ಗಲಾಟೆ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಸಮೀಪದ ಹಿರೇಹಳ್ಳ ಬ್ರಿಡ್ಜ್ ಗೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ವಾಗೀಶ್ ಹಿರೇಮಠ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಕೊಪ್ಪಳ ತಾಲೂಕಿನ ಇರಕಲಗಡ ನಿವಾಸಿಯಾಗಿದ್ದು, ಗ್ರಾಮದಲ್ಲಿ ಜೆರಾಕ್ಸ್ ಅಂಗಡಿ ಹಾಕಿಕೊಂಡಿದ್ದಾನೆ.

ವಾಗೀಶ್ ಕಳೆದ ಎರಡು ದಿನಗಳ ಹಿಂದೇ ಮನೆಯಲ್ಲಿ ಗಲಾಟೆ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದನು ಎನ್ನಲಾಗಿದೆ. ಮಂಗಳವಾರ ರಾತ್ರಿ ವ್ಯಕ್ತಯೊಬ್ಬರ ಶವ ಪತ್ತೆಯಾಗಿತ್ತು. ಈ ವಿಷಯ ತಿಳಿದ ಕೊಪ್ಪಳ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಹುಡುಕಾಡಿದಾಗ ಆತನ ಬಳಿ ಇದ್ದ ಗುರುತಿನ ಚೀಟಿಯಿಂದ ಪತ್ತೆಯಾಗಿದೆ.
ಈ ಕುರಿತು ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply