12 ಅಡಿ ಉದ್ದದ, 8 ಕೆ.ಜಿ ತೂಕದ ಭಾರೀ ಗಾತ್ರದ ಕಾಳಿಂಗ ಸರ್ಪ ಪತ್ತೆ

ಮಡಿಕೇರಿ: 12 ಅಡಿ ಉದ್ದದ, 8 ಕೆ.ಜಿ ತೂಕದ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪವಿರುವ ಕೆರೆಮೂಲೆ ಗ್ರಾಮದಲ್ಲಿ ಸೆರೆಯಾಗಿದೆ.

ಬುಧವಾರ ಬೆಳಗ್ಗೆ ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಸುಮಾರು 12 ಅಡಿ ಉದ್ದ 8 ಕೆ.ಜಿ ತೂಕದ ಭಾರೀ ಗಾತ್ರದ ಹಾವನ್ನು ಅರಂತೋಡಿನ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಕಾರ್ಯಾಚರಣೆ ಮಾಡಿ ಹಾವನ್ನು ಸಂರಕ್ಷಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ನಿಸರ್ಗ ಧಾಮದಲ್ಲಿ ಬಿಟ್ಟಿದ್ದಾರೆ.

ಸಾಮಾನ್ಯವಾಗಿ ಶೀತ ಪ್ರದೇಶಗಳಲ್ಲಿ ವಾಸ ಮಾಡುವ ಕಾಳಿಂಗ ಸರ್ಪ ಆಕಸ್ಮಿಕವಾಗಿ ರಸ್ತೆ ಬದಿಗೆ ಬಂದು ಸೇರಿಕೊಂಡಿತ್ತು. ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹಾವು ರಸ್ತೆಯಲ್ಲಿ ಇರುವುದನ್ನು ಗಮನಿಸಿದ ಸ್ಥಳಿಯರು ಶಿವಾನಂದ ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶಿವಾನಂದ ಹಾಗು ಅವರ ಸ್ನೇಹಿತರ ತಂಡ ಸತತ ಒಂದು ಗಂಟೆ ಪ್ರಯಾಸಪಟ್ಟು ಹಾವನ್ನು ಸೆರೆಹಿಡಿದಿದ್ದಾರೆ. ಸೆರೆ ಹಿಡಿದ ಅಪರೂಪದ ಹಾವನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿ ಹಾವುಗಳ ಬಗ್ಗ ಜಾಗೃತಿ ಮೂಡಿಸುವ ಶಿವಾನಂದ, ಹಾವುಗಳ ಅಳಿವಿನ ಬಗ್ಗೆ ಜನರಿಗೆ ಹಾವುಗಳ ಬಗ್ಗೆ ಇರುವ ಕೆಲ ತಪ್ಪು ತಿಳುವಳಿಕೆಗಳ ಬಗ್ಗೆ ಜಾಗೃತಿ ಮೂಡಿಸಿ ಹಾವು ಕಂಡರೆ ಕೊಲ್ಲಬೇಡಿ ನಮಗೆ ಮಾಹಿತಿ ನೀಡಿ. ನಾವು ಹಾವನ್ನು ರಕ್ಷಿಸಿ ತೆಗೆದುಕೊಂಡು ಹೋಗಿ ಜೀವ ಉಳಿಸುತ್ತೇವೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಕಳೆದ ಹಲವು ವರ್ಷಗಳಿಂದ ಹಾವುಗಳನ್ನು ರಕ್ಷಿಸುವ ಕೆಲಸ ಮಾಡುತ್ತಿರುವ ಶಿವಾನಂದ ಅವರು ಈವರೆಗೆ ಸಾವಿರಕ್ಕೂ ಹೆಚ್ಚು ಹಾವುಗಳನ್ನು ರಕ್ಷಿಸಿ ಕಾಡಿಗೆ ಮರಳಿಸಿದ್ದಾರೆ. ಇವುಗಳ ಪೈಕಿ 10 ಕಾಳಿಂಗ ಸರ್ಪಗಳು ಸೇರಿವೆ.

https://www.youtube.com/watch?v=f7DqOOUc-gI

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *