ಮೈಸೂರು: ಗಣಪತಿ ವಿಸರ್ಜನೆ ವಿಚಾರವಾಗಿ ಗ್ರಾ.ಪಂ ಸದಸ್ಯನಿಗೆ ದೂರವಾಣಿ ಕರೆ ಮಾಡಿದ ಎಸ್ಐ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿವೆ.
ಸಿದ್ದರಾಜ್ ನಾಯಕ ರಾಮನಹಳ್ಳಿ ಗ್ರಾ.ಪಂ ಸದಸ್ಯ ಹಾಗೂ ಅಂಗವಿಕಲರಿಗೆ ಗಣೇಶ ವಿಸರ್ಜನೆಯ ವಿಚಾರವಾಗಿ ಇಲವಾಲ ಠಾಣೆ ಎಸ್ಐ ಮುದ್ದು ಮಾದಪ್ಪ ಅವಾಚ್ಯ ಶಬ್ದಗಳಿಂದ ಬೈದಿದ್ದಾರಂತೆ. ಅವಾಚ್ಯ ಶಬ್ದದಿಂದ ನಿಂದಿಸಿದ ಹಿನ್ನಲೆ ಗ್ರಾಮಸ್ಥರು ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆಗೆ ಮುಂದಾದರು.
ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಮೈಸೂರು ತಾಲೂಕಿನ ಇಲವಾಲ ಪೊಲೀಸ್ ಠಾಣೆ ಬಳಿ ಗ್ರಾಮಸ್ಥರು ಪ್ರತಿಭಟನೆ ಮಾಡಿ, ಸಬ್ ಇನ್ಸ್ಪೆಕ್ಟರ್ ವಿರುದ್ಧ ಘೊಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇನ್ಸ್ಪೆಕ್ಟರ್ ಮುದ್ದು ಮಾದಪ್ಪರನ್ನು ಕೂಡಲೇ ಸೇವೆಯಿಂದ ವಜಾಗೊಳಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply