ಮತ್ತೊಮ್ಮೆ ಮೋದಿ ಅಧಿಕಾರಕ್ಕೆ- ಈಗ ಚುನಾವಣೆ ನಡೆದ್ರೆ ಯಾರಿಗೆ ಎಷ್ಟು ಸ್ಥಾನ?

ನವದೆಹಲಿ: ಲೋಕಸಭಾ ಮಹಾ ಸಮರಕ್ಕೆ 7 ತಿಂಗಳು ಬಾಕಿ ಇರುವ ವೇಳೆಯೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದೆ. ಈ ವೇಳೆ ರಾಷ್ಟ್ರೀಯ ಸುದ್ದಿ ವಾಹಿನಿ ಎಬಿಪಿ ಸಿ ವೋಟರ್ ಸರ್ವೆ ಚುನಾವಣಾ ಪೂರ್ವ ಸಮೀಕ್ಷೆ ಮಾಡಿದ್ದು, ಸದ್ಯ ಪರಿಸ್ಥಿತಿಯಲ್ಲಿ ಚುನಾವಣೆ ನಡೆದರೆ ಮತ್ತೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಅಧಿಕಾರ ಪಡೆಯಲಿದೆ ಎಂದು ತಿಳಿಸಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳು 276 ಸ್ಥಾನ ಪಡೆದರೆ, ಕಾಂಗ್ರೆಸ್, ಮೈತ್ರಿ ಪಕ್ಷಗಳು 115 ಸ್ಥಾನ ಮತು ಇತರೆ ಪಕ್ಷಗಳು 152 ಸ್ಥಾನ ಗಳಿಸಲಿವೆ ಎಂದು ಸಮೀಕ್ಷೆ ತಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ 336, ಕಾಂಗ್ರೆಸ್ ನೇತೃತ್ವದ ಯುಪಿಎ 60, ಇತರೆ ಪಕ್ಷಗಳು 147 ಸ್ಥಾನ ಪಡೆದಿತ್ತು.

ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನ?
ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ. ಆದರೆ ಮೈತ್ರಿ ಮಾಡಿಕೊಂಡರೂ ಬಿಜೆಪಿ ಕಳೆದ ಬಾರಿಗಿಂತ 1 ಸ್ಥಾನ ಹೆಚ್ಚು ಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಬಿಜೆಪಿ 18 (+1), ಕಾಂಗ್ರೆಸ್ 07 (-1), ಜೆಡಿಎಸ್ 03 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ದೇಶದ ಪ್ರಮುಖ ರಾಜ್ಯಗಳಾದ ಗುಜರಾತ್ ನಲ್ಲಿ ಬಿಜೆಪಿ 24, ಕಾಂಗ್ರೆಸ್ 2 ಸ್ಥಾನ ಪಡೆಯಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ 16, ಕಾಂಗ್ರೆಸ್ 30, ಇತರೆ 2 ಸ್ಥಾನ ಲಭಿಸಲಿದೆ. ಮುಖ್ಯವಾಗಿ ಮಹಾರಾಷ್ಟ್ರ ರಾಜಕರಾಣದಲ್ಲಿ ಎನ್‍ಸಿಪಿ, ಕಾಂಗ್ರೆಸ್ ಮೈತ್ರಿ ಚುನಾವಣೆ ನಡೆಸಿ ಶಿವಸೇನೆ ಎನ್‍ಡಿಎ ಮೈತ್ರಿಕೂಡದಿಂದ ಹೊರ ಬಂದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆ.

ದೇಶದ ಹೆಚ್ಚು ಲೋಕಾಸಭಾ ಸ್ಥಾನ ಹೊಂದಿರುವ ಉತ್ತರ ಪ್ರದೇಶ ದಲ್ಲಿ ಬಿಜೆಪಿ 36, ಕಾಂಗ್ರೆಸ್ 02, ಇತರೆ ಪಕ್ಷಗಳು 42 ಸ್ಥಾನ ಗಳಿಸಲಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಸ್‍ಪಿ ಹಾಗೂ ಬಿಎಸ್‍ಪಿ ಪಕ್ಷಗಳ ಮೈತ್ರಿಯನ್ನು ಇತರೆ ಎಂದು ಗುರುತಿಸಲಾಗಿದೆ. ಮಧ್ಯ ಪ್ರದೇಶ ಬಿಜೆಪಿ 23, ಕಾಂಗ್ರೆಸ್ 6 ಸ್ಥಾನ ಗಳಿಸಲಿದೆ. ಉಳಿದಂತೆ ದಕ್ಷಿಣ ಭಾರತದ ಆಂಧ್ರಪ್ರದೇಶದಲ್ಲಿ ವೈಎಸ್‍ಆರ್ ಕಾಂಗ್ರೆಸ್ ಕ್ಲೀನ್‍ಸ್ವೀಪ್ ಮಾಡಲಿದೆ ಎಂದು ಸರ್ವೇ ಹೇಳಿದ್ದು, ವೈಎಸ್‍ಆರ್ ಸಿಗೆ 22, ಟಿಡಿಪಿಗೆ 4 ಸೀಟ್ ಸಿಗಲಿದೆ ಎಂದು ತಿಳಿಸಿಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *