-ಬಳ್ಳಾರಿ ಗೆಲುವು ಸಾಧಿಸಲು ‘ಕೈ’ ರಣತಂತ್ರ
ಬಳ್ಳಾರಿ: ಶಾಸಕ ಶ್ರೀರಾಮುಲು ರಾಜೀನಾಮೆಯಿಂದ ತೆರವಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಈ ಬೆನ್ನಲ್ಲೇ ಬಿಜೆಪಿ ತೆಕ್ಕೆಯಲ್ಲಿರುವ ಲೋಕಸಭಾ ಕ್ಷೇತ್ರವನ್ನ ಕಸಿದುಕೊಳ್ಳಲು ಕಾಂಗ್ರೆಸ್ ತಂತ್ರವೊಂದನ್ನ ರೂಪಿಸಿದೆ.
ಮೈತ್ರಿಕೂಟ ಸರ್ಕಾರ ಕೆಡವಲು ಆಪರೇಷನ್ ಕಮಲಕ್ಕೆ ಕೈ ಹಾಕಿದ್ದ ರೆಡ್ಡಿ-ರಾಮುಲುಗೆ ಲೋಕಸಭೆಯ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಕೈ ನಾಯಕರು ಸೆಚ್ಕ್ ಹಾಕಿದ್ದಾರಂತೆ. ಬಿಜೆಪಿಯಿಂದ ಲೋಕಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕತೆ ತೋರುತ್ತಿರುವ ಅಭ್ಯರ್ಥಿಗಳನ್ನೆ ಪಕ್ಷಕ್ಕೆ ಸೆಳೆದು ಅವರನ್ನೇ ಅಭ್ಯರ್ಥಿಯಾಗಿ ಮಾಡುವ ಆಲೋಚನೆ ಕೈ ನಾಯಕರದ್ದಾಗಿದೆ. ಈ ಮೂಲಕ ಆಪರೇಷನ್ ಕಮಲಕ್ಕೆ ಕೈ ಹಾಕಿದವರಿಗೆ ಆಪರೇಷನ್ ಭೀತಿ ಹುಟ್ಟಿಸಲು ಕೈ ನಾಯಕರು ರಣತಂತ್ರ ರೂಪಿಸಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

ಶ್ರೀರಾಮುಲುಗೆ ಸೆಡ್ಡು ಹೊಡೆದ ಡಿಕೆಶಿ: ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ 6 ರಿಂದ 7 ಮಂದಿ ಆಕ್ಷಾಂಕಿಗಳು ಸಜ್ಜಾಗಿ ನಿಂತಿದ್ದಾರೆ. ಆದರೆ ಬಿಜೆಪಿ ಮಾತ್ರ ಇದೂವರೆಗೂ ಅಭ್ಯರ್ಥಿಯನ್ನ ಘೋಷಣೆ ಮಾಡಲು ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಿ ಬಳ್ಳಾರಿ ಬೈ ಎಲೆಕ್ಷನ್ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಡಿಕೆ ಶಿವಕುಮಾರ್ ಈ ಚುನಾವಣೆಯಲ್ಲಿ ರೆಡ್ಡಿ- ರಾಮುಲುಗೆ ಬಿಸಿ ಮುಟ್ಟಿಸಲು ಆಪರೇಷನ್ ಹಸ್ತ ಮಾಡೋ ಪ್ಲಾನ್ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯಿಂದ ಟಿಕೇಟ್ ವಂಚಿತರಾದವರನ್ನೆ ಪಕ್ಷಕ್ಕೆ ಕರೆತಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲಿಸಿ ರೆಡ್ಡಿ-ರಾಮುಲುಗೆ ಬಿಸಿ ಮುಟ್ಟಿಸಲು ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗೇ ಮಾಜಿ ಸಂಸದ, ಶಾಸಕರಾಗಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀರಾಮುಲು ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಹೆಸರನ್ನ ಘೋಷಣೆ ಮಾಡಲು ಹಿಂದೆ ಮುಂದೆ ನೋಡ್ತಿದ್ದಾರೆ. ಒಟ್ಟಾರೆ ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಆಪರೇಷನ್ ಕಮಲಕ್ಕೆ ಕೈ ಹಾಕಿದವರಿಗೆ ಜಯವಾಗುತ್ತೋ ಅಥವಾ ಕಾಂಗ್ರೆಸ್ ನಾಯಕರ ರಣತಂತ್ರ ಯಶ್ವಸಿಯಾಗುತ್ತೋ ಅನ್ನೋದು ಇದೀಗ ಎಲ್ಲರ ಕುತೂಹಲ ಕೆರಳಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv


Leave a Reply