ಮತ್ತು ಬರುವ ಪಾನೀಯ ಕುಡಿಸಿ ಅಪ್ರಾಪ್ತೆಯ ಮೇಲೆರಗಿದ ಕಾಮುಕರು – ವಿಡಿಯೋ ಮಾಡಿ ಅಪ್ಲೋಡ್

ಲಕ್ನೋ: ಅಪ್ರಾಪ್ತ ಹುಡುಗಿಯನ್ನು ಐದು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಗಾಜೀಯಾಬಾದ್ ನಲ್ಲಿ ನಡೆದಿದೆ.

ಈ ಘಟನೆ ಸೆಪ್ಟೆಂಬರ್ 25 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 16 ವರ್ಷದ ಸಂತ್ರಸ್ತೆ ತನ್ನ ಫ್ರೆಂಡ್ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧೀಕ್ಷಕ ಶ್ಲೋಕ್ ಕುಮಾರ್ ಹೇಳಿದ್ದಾರೆ.

ಏನಿದು ಪ್ರಕರಣ?
ಸೆಪ್ಟೆಂಬರ್ 25 ಸಂತ್ರಸ್ತೆ ತನ್ನ ಫ್ರೆಂಡ್ ಹುಟ್ಟುಹಬ್ಬದ ಪಾರ್ಟಿಗೆಂದು ಹೋಗಿದ್ದಾಳೆ. ಅಲ್ಲಿ ಐದು ಮಂದಿ ಕಾಮುಕರು ಸಂತ್ರಸ್ತೆಗೆ ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ ಪಾನೀಯವನ್ನು ಕುಡಿಸಿದ್ದಾರೆ. ಇದರಿಂದ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆಕೆ ಈ ಸ್ಥಿತಿಯಲ್ಲಿ ಇದ್ದಾಗ ಕಾಮುಕರು ಬಜರಿಯಾ ಮಾರುಕಟ್ಟೆ ರೈಲ್ವೆ ರಸ್ತೆಯಲ್ಲಿರುವ ಹೋಟೆಲಿಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಅಲ್ಲಿ ಐದು ಮಂದಿಯೂ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.

ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದಾರೆ. ಅತ್ಯಾಚಾರದ ಬಳಿಕ ಈ ವಿಚಾರವನ್ನು ಪೋಷಕರು ಅಥವಾ ಪೊಲೀಸರಿಗೆ ಹೇಳಿದರೆ ಮುಂದೆ ಉಂಟಾಗುವ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯನ್ನು ಕೂಡ ಹಾಕಿದ್ದಾರೆ ಎಂದು ಎಸ್‍ಪಿ ಹೇಳಿದ್ದಾರೆ.

ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ಪೋಷಕರಿಗೆ ವಿವರಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರೂಖ್, ಚಂದ್, ಶದಾಬ್, ರಹೀಸ್ ಮತ್ತು ಶಹೀದ್ ವಿರುದ್ಧ ಐಪಿಸಿ ಸೆಕ್ಷನ್ 375 (ಅತ್ಯಾಚಾರ) ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನಾದ ಶಾರೂಖ್ ನನ್ನು ಬಂಧಿಸಲಾಗಿದೆ ಎಂದು ಶ್ಲೋಕ್ ಕುಮಾರ್ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *