ಪತಿ ಬರುವಿಕೆಗಾಗಿ ಕಾಯ್ತಿದ್ದ ಗರ್ಭಿಣಿಯ ಮೇಲೆ ಮೂವರಿಂದ ಪೈಶಾಚಿಕ ಕೃತ್ಯ

ಕೋಲ್ಕತ್ತಾ: ಗರ್ಭಿಣಿ ಮಹಿಳೆಯ ಮೇಲೆ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದಲ್ಲಿ ಅಸನ್ನೋಲ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಗುರುವಾರ ಸಂತ್ರಸ್ತೆ ಒಬ್ಬಳೆ ಮನೆಯಲ್ಲಿದ್ದಾಗ ನಡೆದಿದೆ. ಮಹಿಳೆ 4 ತಿಂಗಳ ಗರ್ಭಿಣಿ ಎಂದು ವರದಿಯಾಗಿದೆ. ಮನೆಯಲ್ಲಿ ಒಬ್ಬಳೆ ಇದ್ದು, ಪತಿಗಾಗಿ ಕಾಯುತ್ತಿದ್ದರು. ಈ ವೇಳೆ ಮನೆಯಲ್ಲಿ ಒಂಟಿಯಾಗಿದ್ದನ್ನು ತಿಳಿದ ಮೂವರು ಕಾಮುಕರು ಬಂದು ಬಾಗಿಲು ಬಡಿದಿದ್ದಾರೆ. ಸಂತ್ರಸ್ತೆ ಬಾಗಿಲು ತೆರೆಯುತ್ತಿದ್ದಂತೆ ಬಲವಂತವಾಗಿ ಒಳಗೆ ನುಗ್ಗಿ ಗರ್ಭಿಣಿ ಎಂದು ನೋಡದೆ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಆಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಅಸ್ಸಾನ್ಸೋಲ್ ದುರ್ಗಾಪುರ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಗಿ ಪೊಲೀಸರು ಹೇಳಿದ್ದಾರೆ.

ಕುಟುಂಬದವರು ನೀಡಿದ ದೂರಿನ ಆಧಾರದ ಮೇರೆಗೆ ಮೂವರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಒಬ್ಬನ ಹೆಸರು ಕುಲದೀಪ್ ಸಿಂಗ್ ಎಂದು ತಿಳಿದು ಬಂದಿದೆ. ಆದರೆ ಮತ್ತಿಬ್ಬರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ. ಸಂತ್ರಸ್ತೆ ಕೂಡ ನ್ಯಾಯಾಲಯದಲ್ಲಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಆರೋಪಿಗಳಿಗಾಗಿ ಬಲೆ ಬೀಸಿದ್ದೇವೆ. ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರಾದ ಲಕ್ಷ್ಮಿ ನಾರಾಯಣ ಮೀನಾ ಅವರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *